ಶೇಕಡ 20 ರಷ್ಟು ಪಠ್ಯ ಕಡಿತಗೊಳಿಸಲು ಶಿಕ್ಷಣ ಇಲಾಖೆ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಈ ವರ್ಷವೂ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಪಠ್ಯ ಕಡಿತ ಮಾಡಲಾಗುವುದು. ಶೇಕಡ 20 ರಷ್ಟು ಪಠ್ಯ ಕಡಿತಗೊಳಿಸಲು ಶಿಕ್ಷಣ ಇಲಾಖೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ವರ್ಷವೂ ಶಾಲೆಗಳು ವಿಳಂಬವಾಗಿ ಆರಂಭವಾದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿಯ ಲ್ಲಿ ಶೇಕಡ 20 ರಷ್ಟು ಪಠ್ಯ ಕಡಿತಗೊಳಿಸಲಾಗುತ್ತದೆ.

ಪಿಯುಸಿಯಲ್ಲಿ ಪಠ್ಯ ಕಡಿತಗೊಳಿಸುವ ಚಿಂತನೆ ಇಲ್ಲ ಎನ್ನಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತಂತೆ ತೀರ್ಮಾನ ಕೈಗೊಳ್ಳಲಾಗಿದೆ.

ಕಳೆದ ವರ್ಷ ಎಸ್‌ಎಸ್‌ಎಲ್ ಸಿ  ವಿದ್ಯಾರ್ಥಿಗಳಿಗೆ ಶೇಕಡ 30 ರಷ್ಟು ಪಠ್ಯ ಕಡಿತಗೊಳಿಸಲಾಗಿತ್ತು. ಈ ಬಾರಿ ಶೇಕಡ 20 ರಷ್ಟು ಪಠ್ಯ ಕಡಿತಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಹೇಳಲಾಗಿದೆ. ಬೋಧನೆಗೆ ಬಾಕಿ ಇರುವ ಪಠ್ಯಕ್ರಮದಲ್ಲಿ ನಿಗದಿತ ಪಠ್ಯಕ್ರಮವನ್ನು ಕಡಿತ ಮಾಡಲಾಗುವುದು ಎನ್ನಲಾಗಿದೆ.

ಪ್ರತಿವರ್ಷ 240ಕ್ಕೂ ಹೆಚ್ಚು ಶೈಕ್ಷಣಿಕ ದಿನಗಳು ಸಿಗುತ್ತಿದ್ದವು. ಆದರೆ, ಪ್ರಸಕ್ತ ವರ್ಷ ತಡವಾಗಿ ಶಾಲೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ 140ಕ್ಕೂ ಕಡಿಮೆ ದಿನಗಳು ಇವೆ. ಇದರಿಂದ ಬೋಧನೆಗೆ ಶಿಕ್ಷಕರಿಗೆ ಒತ್ತಡವಾಗುತ್ತಿತ್ತು. ಒತ್ತಡದಲ್ಲೇ ಬೇಗನೆ ಪಠ್ಯ ಮುಗಿಸಲು ಶಿಕ್ಷಕರು ಮುಂದಾಗಿದ್ದು, ದಿನಕ್ಕೊಂದು ಪಾಠದಂತೆ ಬೋಧನೆ ಮಾಡುತ್ತಿದ್ದರು. ಒತ್ತಡದಿಂದಾಗಿ ವಿದ್ಯಾರ್ಥಿಗಳಿಗೂ ಕೂಡ ಪಾಠ ಅರ್ಥವಾಗುತ್ತಿರಲಿಲ್ಲ. ಪಠ್ಯ ಕಡಿತಗೊಳಿಸಬೇಕು ಎಂದು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ತೀವ್ರ ಒತ್ತಡ ಕೇಳಿಬಂದಿತ್ತು. ಹೀಗಾಗಿ ಪಠ್ಯ ಕಡಿತಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಚಿಂತನೆ ನಡೆಸಿದ್ದು, ಶಿಕ್ಷಣ ತಜ್ಞರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪಠ್ಯ ಕಡಿತದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

 

Swathi MG

Recent Posts

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

3 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

5 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

6 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

28 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

40 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

50 mins ago