News Karnataka Kannada
Monday, April 29 2024
ಕರ್ನಾಟಕ

ಸಚಿವ ಆನಂದ್‌ ಸಿಂಗ್‌ ರಾಜೀನಾಮೆ ನೀಡಿಲ್ಲ ಎಂದ ಮುಖ್ಯ ಮಂತ್ರಿ ಬೊಮ್ಮಾಯಿ

Anand Singh Minister
Photo Credit :

ಬೆಂಗಳೂರು, ; ಸಚಿವ ಆನಂದ್‌ಸಿಂಗ್ ರಾಜೀನಾಮೆ ನೀಡಿಲ್ಲ. ಅವರನ್ನು ಕರೆದು ಮಾತನಾಡುತ್ತೇನೆ. ಎಲ್ಲವೂ ಸರಿ ಹೋಗಲಿದೆ ಎಂದು ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ಆರ್‌ಟಿ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ನೀಡಿರುವ ಖಾತೆಯಿಂದ ಅಸಮಾಧಾನಗೊಂಡಿರುವ ಆನಂದ್‌ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ನನ್ನನ್ನು ಭೇಟಿ ಮಾಡಿ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ. ಎಲ್ಲವೂ ಸರಿ ಹೋಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಸಚಿವ ಆನಂದ್‌ಸಿಂಗ್ ಹಾಗೂ ನಾನು ಮೂರು ದಶಕಗಳ ಗೆಳೆಯರು. ನಿನ್ನೆಯೂ ಅವರ ಜತೆ ಮಾತನಾಡಿದ್ದೇನೆ. ಅವರು ಅವರ ವಿಚಾರಗಳನ್ನು ಮನವರಿಕೆ ಮಾಡಿದ್ದೇನೆ ಎಂದರು.ಎರಡು ದಿನಗಳ ಹಿಂದೆ ನಿಮ್ಮನ್ನು ಭೇಟಿ ಮಾಡಿದ್ದಾಗ ಆನಂದ್‌ಸಿಂಗ್ ರಾಜೀನಾಮೆ ಪತ್ರ ನೀಡಿದ್ದಾರೆಯೇ ಎಂಬ ಪ್ರಶ್ನೆಗೆ, ಅಂತಹುದ್ಯಾವುದು ಇಲ್ಲ. ಎಲ್ಲ ನೀವು ಹೇಳಿದ ಹಾಗೆ ಆಗುತ್ತದೆಯೋ, ಎಲ್ಲವೂ ನಿಮಗೆ ಗೊತ್ತಾಗುತ್ತದೆಯೋ ಎಂದು ಮಾಧ್ಯಮಗಳ ವಿರುದ್ಧ ಗರಂ ಆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು