ಬೆಂಗಳೂರು, – ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ಮಾಡಲು ಎಂಬುದನ್ನು ಮಂತ್ರಿಗಳೂ ಅರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸಚಿವ ಸ್ಥಾನ ಸಿಕ್ಕ ಬಳಿಕ ಸಚಿವರುಗಳು ತಮ್ಮ ಕ್ಷೇತ್ರಗಳಿಗೆ ತೆರಳಿ ವಿಜಯೋತ್ಸವ, ಸನ್ಮಾನ ಸಮಾರಂಭಗಳಲ್ಲಿ ಭಾಗಿಯಾಗುತ್ತಿರುವ ಬಗ್ಗೆ ಸರಣಿ ಟ್ವೀಟ್ ಮಾಡಿ ಕಿಡಿಕಾರಿರುವ ಅವರು ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನಕ್ಕಲ್ಲ, ಸೇವೆಗೆ ಎಂಬುದನ್ನು ಮಂತ್ರಿಗಳು ಅರಿತುಕೊಳ್ಳಬೇಕು ಎಂದಿದ್ದಾರೆ.
ಬಿಜೆಪಿ ತನ್ನ ಇಮೇಜ್ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ ಯಡಿಯೂರಪ್ಪ ಸರ್ಕಾರದ ಮಂತ್ರಿ ಮಂಡಲವನ್ನೆ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿ ತಮ್ಮ ಅದೇ ಹಳೇ ಚಾಳಿಯನ್ನು ಮುಂದುವರೆಸಿದ್ದಾರೆ. ಈ ಸಚಿವರಿಗೆ ಜನರ ಸಂಕಷ್ಟ ಪರಿಹಾರವಾಗಬೇಕಿಲ್ಲ. ವಿಜಯೋತ್ಸವ, ಸನ್ಮಾನಗಳಾಗಬೇಕು ಎಂದು ಕುಮಾರಸ್ವಾಮಿ ಅವರು ಟ್ವಿಟ್ಟರ್ನಲ್ಲಿ ಹರಿಹಾಯ್ದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ ಅಲ್ಲಿನ ಪ್ರವಾಹ ಪರಿಸ್ಥಿತಿ, ಕೋವಿಡ್ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಮುಖ್ಯಮಂತ್ರಿಯವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳಲ್ಲಿ ವಿಜಯೋತ್ಸವ ಆಚರಿಸುತ್ತಿದ್ದಾರೆ ಎಂದು ಅವರು ಟ್ವಿಟ್ಟರ್ನಲ್ಲಿ ಟೀಕಿಸಿದ್ದಾರೆ.
ಸಚಿವ ಸ್ಥಾನ ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ಮಾಡಲು ಎಂದ ಹೆಚ್ ಡಿ ಕುಮಾರ ಸ್ವಾಮಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.