ಕರ್ನಾಟಕ

ಸಮಾಜ ಘಾತುಕ ಶಕ್ತಿಗಳನ್ನು ಸದೆ ಬಡಿಯಲು ಪೋಲೀಸ್‌ ಪಡೆ ಸನ್ನದ್ದ ; ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು, ; ದುರ್ವರ್ತನೆ ತೋರುವ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಪೊಲೀಸರು ಯಾರನ್ನೂ ಬಿಡದೆ ಸದೆಬಡೆಯುತ್ತಾರೆ ಎಂದು ಸಮಾಜಘಾತುಕ ಶಕ್ತಿಗಳಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕೆಎಸ್‍ಆರ್‍ಪಿ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಐಕ್ಯತೆ ಮತ್ತು ದೈಹಿಕ ಸದೃಢತೆಗಾಗಿ ಸ್ವಾತಂತ್ರ್ಯತೆಯ ಓಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾಗರಿಕ ಸಮಾಜದಲ್ಲಿ ದುರ್ವತನೆ ಮೆರೆಯುವ ಯಾವ ವ್ಯಕ್ತಿಗಳನ್ನು ಸುಮ್ಮನೆ ಬಿಡುವುದಿಲ್ಲ. ಅಂತಹ ಶಕ್ತಿಗಳನ್ನು ಹತ್ತಿಕ್ಕಲು ನಮ್ಮ ಪೊಲೀಸರು ಸನ್ನದ್ದರಾಗಿದ್ದಾರೆ. ಸತ್ಪ್ರಜೆಗಳಾಗಿ ನಡೆದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕಿವಿಮಾತು ಹೇಳಿದರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಯ ಬಳಿ ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ಆರೋಪಿಗಳನ್ನು ನಮ್ಮ ಪೊಲೀಸರು ತ್ವರಿತವಾಗಿ ಬಂಧಿಸಿದ್ದಾರೆ. ಇದು ಎಲ್ಲರಿಗೂ ಪಾಠವಾಗಬೇಕು. ಘಾತುಕ ಶಕ್ತಿಗಳು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದಕ್ಕೆ ಇದು ನಿದರ್ಶನ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಕಾನೂನು ಪ್ರಕಾರವೇ ಶಿಕ್ಷೆಯಾಗಲಿದೆ. ಯಾರೇ ಈ ರೀತಿಯ ಕೃತ್ಯ ಎಸಗಿದರೂ ಖಂಡಿತವಾಗಿಯೂ ಶಿಕ್ಷೆಯಾಗುತ್ತದೆ. ಕೆಟ್ಟತನ ತೋರುವ ವ್ಯಕ್ತಿಗಳನ್ನು ಬಿಡುವುದಿಲ್ಲ ಎಂದು ಗುಡುಗಿದರು. ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ವೀಸಾ ಅವಧಿ ಮುಗಿದ ನಂತರ ವಿದೇಶಿ ಪ್ರಜೆಗಳು ಇಲ್ಲಿಯೇ ಉಳಿಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಅಂಥವರನ್ನು ವಾಪಸ್ ಕಳುಹಿಸಲು ಕೆಲವು ಕಾನೂನು ತೊಡಗಕುಗಳಿವೆ ಎಂದರು.

Indresh KC

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

10 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

20 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

25 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

32 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

42 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

46 mins ago