News Karnataka Kannada
Sunday, May 19 2024
ಕರ್ನಾಟಕ

ಸಮುದ್ರ ದುರಂತ ಮಡಿದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

Photo Credit :

ಸಮುದ್ರ ದುರಂತ ಮಡಿದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಕಾರವಾರ: ಸಮೀಪದ ಕೂರ್ಮಗಢ ದ್ವೀಪದಲ್ಲಿ ಜ.21ರಂದು ಸಂಭವಿಸಿದ ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯನ್ನು 2 ಲಕ್ಷದಿಂದ 5 ಲಕ್ಷಕ್ಕೆ ಏರಿಸಲಾಗಿದೆ ಎಂದು ಕಂದಾಯ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ದುರಂತದಲ್ಲಿ ಒಟ್ಟು 15 ಜನರು ಮೃತಪಟ್ಟಿದ್ದು, ಇವರ ಕುಟುಂಬಗಳಿಗೆ ಈಗಾಗಲೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಜತೆಗೆ, ಇದುವರೆಗೂ ಇನ್ನೂ ಪತ್ತೆಯಾಗದಿರುವ ಒಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ದೇಶಪಾಂಡೆ, ದುರಂತದಲ್ಲಿ ಮಡಿದಿರುವವರೆಲ್ಲರೂ ಬಡಕುಟುಂಬಗಳಿಗೆ ಸೇರಿದವರಾಗಿದ್ದು, ಈಗ ಈ ಕುಟುಂಬಗಳೆಲ್ಲವೂ ತೀವ್ರ ಆಘಾತಕ್ಕೆ ಒಳಗಾಗಿವೆ. ಈ ಕುಟುಂಬಗಳಿಗೆ ಮತ್ತಷ್ಟು ಹೆಚ್ಚಿನ ಪರಿಹಾರ ಒದಗಿಸುವಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ತಾವು ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ್ದು, ಅವರು ತಕ್ಷಣವೇ ಹೆಚ್ಚಿನ ಪರಿಹಾರ ನೀಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿವರಿಸಿದ್ದಾರೆ.

ಪ್ರಧಾನಮಂತ್ರಿಗೂ ಪತ್ರ: ಇದೇ ಸಂದರ್ಭದಲ್ಲಿ ಸಚಿವರು, ಕೂರ್ಮಗಢ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ಆರ್ಎಫ್) ನಿಧಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆಯಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು