Categories: ಕರ್ನಾಟಕ

ಸರ್ಕಾರೀ ನೌಕರರ ಅವಲಂಬಿತರಿಗೂ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು, ;ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ರೂಪಿಸುವ ಬಗ್ಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963ರ ಅನ್ವಯ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರು ಸರ್ಕಾರಿ ಆಸ್ಪತ್ರೆ ಹಾಗೂ ಸರ್ಕಾರದ ಮಾನ್ಯತೆ ಹೊಂದಿದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ಚಿಕಿತ್ಸೆಯ ವೆಚ್ಚದ ಮರುಪಾವತಿಯನ್ನು ಸಿ.ಜಿ.ಹೆಚ್.ಎಸ್ ದರ ಪಟ್ಟಿಯನ್ವಯ ಆಯಾ ಇಲಾಖೆ ಹಂತದಲ್ಲಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಈ ಯೋಜನೆಯಡಿ ಹೃದ್ರೋಗ, ಕ್ಯಾನ್ಸರ್, ನ್ಯೂರೋ ಸರ್ಜರಿ, ಸುಟ್ಟ ಗಾಯ, ಗಂಭೀರ ಗಾಯಗಳು, ಪೀಡಿಯಾಟ್ರಿಕ್, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ ಸೇರಿದಂತೆ 7 ಮಾರಣಾಂತಿಕ ಕಾಯಿಲೆಗಳನ್ನು ಗುರುತಿಸಲಾಗಿದೆ. ಈ ಕಾಯಿಲೆಗಳಿಗೆ ಸರ್ಕಾರಿ ನೌಕರರು, ಕುಟುಂಬ ಸದಸ್ಯರು ಜ್ಯೋತಿ ಸಂಜೀವಿನಿ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ವಾಗಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

Indresh KC

Recent Posts

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

8 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

20 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

24 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

49 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

58 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

1 hour ago