News Karnataka Kannada
Thursday, May 02 2024
ಕರ್ನಾಟಕ

ಸಾಮಾನ್ಯ ವಿಮಾ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

Rajya Sabha
Photo Credit :

ದೆಹಲಿ: ಸಾಮಾನ್ಯ ವಿಮಾ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಬುಧವಾರ ಅಂಗೀಕಾರ ದೊರೆಯಿತು. ಒಬಿಸಿ ಮಸೂದೆಗೆ ಅಂಗೀಕಾರ ದೊರೆತ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಸೂದೆಯನ್ನು ಮಂಡಿಸುತ್ತಿದ್ದಂತೆಯೇ ಪ್ರತಿಪಕ್ಷಗಳ ಸದಸ್ಯರು ಗದ್ದಲ ಎಬ್ಬಿಸಿದರು.
ಮಸೂದೆ ಮೇಲೆ ಗದ್ದಲದ ಮಧ್ಯೆಯೇ ಹಣಕಾಸು ಸಚಿವರು ಮಾತನಾಡಲು ಆರಂಭಿಸಿದರು. ಸದನದ ಬಾವಿಗಿಳಿದ ವಿಪಕ್ಷದ ಸದಸ್ಯರು ಏರುದನಿಯಲ್ಲಿ ವಿರೋಧ ವ್ಯಕ್ತಪಡಿಸಿದರು. ತೃಣಮೂಲ ಕಾಂಗ್ರೆಸ್​ ಪಕ್ಷದ ಸದಸ್ಯರಿಂದ ಸಾಮಾನ್ಯ ವಿಮಾ ಮಸೂದೆಗೆ ತೀವ್ರ ವಿರೋಧ ವ್ಯಕ್ತವಾಯಿತು.ಸರ್ಕಾರವು ಸಾಮಾನ್ಯ ವಿಮಾ ಮಸೂದೆಗೆ ತರಾತುರಿಯಲ್ಲಿ ಅಂಗೀಕಾರ ಪಡೆದುಕೊಳ್ಳಲು ಯತ್ನಿಸುತ್ತಿದೆ. ಪ್ರತಿಪಕ್ಷಗಳು ಲಾಲಿಪಾಪ್ ಚೀಪುತ್ತಾ ಕುಳಿತರಲು ಆಗುವುದಿಲ್ಲ. ಸದನದಲ್ಲಿ ಪಾಲನೆಯಾಗಬೇಕಾದ ನಿಯಮಗಳು ಮತ್ತು ಶಿಷ್ಟಾಚಾರಗಳನ್ನು ಕೇಂದ್ರ ಸರ್ಕಾರ ಸಾರಾಸಗಟಾಗಿ ಉಲ್ಲಂಘಿಸುತ್ತಿದೆ. ಕೃಷಿ ಕಾಯ್ದೆಗಳನ್ನು ವಿರೋಧಿಸಿದ ರೀತಿಯಲ್ಲಿಯೇ ಸಾಮಾನ್ಯ ವಿಮಾ ಮಸೂದೆಯನ್ನು ವಿರೋಧಿಸುತ್ತೇವೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ ಬ್ರಯನ್ ಸದನ ಪ್ರವೇಶಿಸುವ ಮೊದಲು ಹೇಳಿಕೆ ನೀಡಿದ್ದರು.
ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಸಾಮಾನ್ಯ ವಿಮಾ ಮಸೂದೆಗೆ ಅಂಗೀಕಾರ ದೊರೆತಿರುವುದರಿಂದ ಸರ್ಕಾರಿ ಸ್ವಾಮ್ಯದ ಸಾಮಾನ್ಯ ವಿಮಾ ಕಂಪನಿಗಳಲ್ಲಿ ಸರ್ಕಾರ ತನ್ನ ಬಂಡವಾಳವನ್ನು ಗಣನೀಯ ಪ್ರಮಾಣದಲ್ಲಿ ಹಿಂಪಡೆಯಲು ಅವಕಾಶ ಸಿಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು