ಮೈಸೂರು: ಎಂಬಿಎ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಘಟನಾ ಸ್ಥಳ ಪರಿಶೀಲನೆ ಮಾಡಲು ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಆಗಮಿಸಿದ್ದಾರೆ.
ಲಲಿತಾದ್ರಿಪುರಂ ರಸ್ತೆಯ ನಿರ್ಜನ ಪ್ರದೇಶದಲ್ಲಿ 6 ಮಂದಿ ಕಿರಾತಕರು ಮಂಗಳವಾರ ಸಂಜೆ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಆಗಮಿಸಿರುವ ಎಡಿಜಿಪಿ ಪ್ರತಾಪ್ ರೆಡ್ಡಿ ಅವರಿಗೆ ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಮಾಹಿತಿ ನೀಡುತ್ತಿದ್ದಾರೆ.
ವಿದ್ಯಾರ್ಥಿನಿಯನ್ನು ರೇಪ್ ಮಾಡಿದ ಕಾಮುಕರು ಆಕೆಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಮತ್ತೊಂದು ಅಂಶ ಬೆಳಕಿಗೆ ಬಂದಿದೆ. ಸುಮಾರು 3 ಲಕ್ಷ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಇದಕ್ಕೆ ಸಂತ್ರಸ್ಥೆ ಹಾಗೂ ಆಕೆಯ ಗೆಳೆಯ ಕೂಡ ಒಪ್ಪಿದ್ದರು. ಆದರೆ ಹಣ ಕೇಳಿ 2 ಗಂಟೆಯಾದರೂ ಸಂತ್ರಸ್ಥೆ ಹಣ ಕೊಡಲು ಸಾಧ್ಯವಾಗದಿದ್ದಾಗ, ಕಾಮುಕರು ಆಕೆಯ ಸ್ನೇಹಿತನ ಮೇಲೆ ಹಲ್ಲೆ ಮಾಡಿದ್ದಾರೆ. ಜೊತೆಗೆ ಕಲ್ಲಿನಿಂದ ಹೊಡೆದು ಇಬ್ಬರ ಮೊಬೈಲ್ ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಇನ್ನು, ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು ದೂರು ಕೊಡದಂತೆ ಆಕೆಗೆ ಬೆದರಿಕೆ ಹಾಕಿದ್ದರು ಎನ್ನಲಾಗುತ್ತಿದೆ. ರೇಪ್ ಮಾಡಿ ವಿಡಿಯೋ ಮಾಡಿಕೊಂಡಿದ್ದ ಆರೋಪಿಗಳು, ಪೊಲೀಸರಿಗೆ ದೂರು ಕೊಟ್ಟರೆ ರೇಪ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದರು ಎಂಬ ಅಂಶವೂ ಬೆಳಕಿಗೆ ಬಂದಿದೆ.
ಸಾಮೂಹಿಕ ಅತ್ಯಾಚಾರ ; ದುಷ್ಕರ್ಮಿಗಳಿಂದ ಮೂರು ಲಕ್ಷ ರೂಪಾಯಿ ಬೇಡಿಕೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.