News Karnataka Kannada
Sunday, May 05 2024
ಕರ್ನಾಟಕ

ಸಾಮೂಹಿಕ ಅತ್ಯಾಚಾರ ಪ್ರಕರಣ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

Indepenceday Cm Basavarajbommai 15082021
Photo Credit :

ನವದೆಹಲಿ, ;ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ‌ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.ರಾಜ್ಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳ ಜೊತೆ ಚರ್ಚೆ ನಡೆಸಲು ದೆಹಲಿಗೆ ಬಂದಿದ್ದು ಇಂದು ಕೃಷಿ ಸಚಿವರನ್ನು ಭೇಟಿ ಮಾಡುತ್ತಿದ್ದೇನೆ. ಸೆಪ್ಟೆಂಬರ್ 5ರಂದು ರೈತರ ಮಕ್ಕಳಿಗೆ ಕೃಷಿ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ನಡೆಯಲಿದ್ದು ಅದಕ್ಕೆ ಕೃಷಿ ಸಚಿವರಿಗೆ ಆಹ್ವಾನ ನೀಡಲಿದ್ದೇನೆ ಎಂದರು.ನಾಳೆ ಜಲಶಕ್ತಿ ಇಲಾಖೆ ಸಚಿವರನ್ನು ಭೇಟಿ ಮಾಡಿ ಮೇಕೆದಾಟು, ಮಹದಾಯಿ ಯೋಜನೆಗಳ ಕುರಿತು ಮಾತುಕತೆ ನಡೆಸಿ ಅದರ ಸಾಧಕ ಬಾಧಕಗಳ ಬಗ್ಗೆ ಕಾನೂನು ತಂಡದ ಜೊತೆಗೆ ಚರ್ಚಿಸಲಿದ್ದೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು