News Karnataka Kannada
Saturday, May 04 2024
ಕರ್ನಾಟಕ

ಸಿ ಟಿ ರವಿ ಕೇಂದ್ರ ಸಚಿವರಾಗಲಿ ಎಂದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ

Siddaramaiah Bng Dt 18 6 21 1862119 Newsk 1414652557
Photo Credit :

ಬೆಂಗಳೂರು : ಸಿದ್ದರಾಮಯ್ಯನವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ. ಹೀಗಾಗಿ ಅವರು ಹೇಳಿದ್ದೆಲ್ಲಾ ಉಲ್ಟಾ ಆಗುತ್ತದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಸಿ.ಟಿ.ರವಿ ಶೀಘ್ರ ಸಂಪುಟಕ್ಕೆ ಸೇರಲಿ, ಸಂಪುಟ ಸಚಿವರಾಗಲಿ ಎಂದು ಹಾರೈಸುತ್ತೇನೆ. ಆ ಮೂಲಕ ನನ್ನ ನಾಲಿಗೆ ಮೇಲೆ ಉಲ್ಟಾ ಮಚ್ಚೆ ಇದೆ ಎಂಬ ಸಿ.ಟಿ.ರವಿ ಅವರ ನಂಬಿಕೆ ನಿಜವಾಗಲಿ ಎಂದು ವ್ಯಂಗ್ಯವಾಡಿದ್ದಾರೆ.
ಟ್ವೀಟ್​ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿ.ಟಿ.ರವಿ ವಿರುದ್ಧ ಲೇವಡಿ ಮಾಡಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯನವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದ್ದರೆ, ಅವರು ಸಿ.ಟಿ.ರವಿ ಸಂಪುಟಕ್ಕೆ ಸೇರಲಿ ಎಂದು ಹೇಳಿರುವ ಮಾತು ಸಹ ಉಲ್ಟಾ ಆಗುತ್ತದೆ. ಸಿ. ಟಿ. ರವಿ ಸಚಿವರಾಗುವುದಿಲ್ಲ ಎಂಬುದು ಈ ಟ್ವೀಟ್​ನ ಅರ್ಥವಾಗಿದೆ. ಮೊನ್ನೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಮಾತನಾಡುತ್ತಾ, ಸಿದ್ದರಾಮಯ್ಯ ಹೇಳಿದ್ದು ಉಲ್ಟಾ ಆಗುತ್ತೆ, ಅವರ ನಾಲಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ವ್ಯಂಗ್ಯವಾಡಿದ್ದರು. ಸಿದ್ದರಾಮಯ್ಯ ಬಿಜೆಪಿ ಉಳಿಯಲ್ಲ ಅಂದಿದ್ದರು. ಆದರೆ ಈಗ ಮತ್ತೆ ಅಧಿಕಾರಕ್ಕೆ ಬಂದಿದೆ. ಈ ಅವಧಿ ಮುಗಿಸಿ ಮತ್ತೆ ಮುಂದಿನ 5 ವರ್ಷಕ್ಕೂ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಸಿದ್ದರಾಮಯ್ಯಗೆ ಸಿ.ಟಿ.ರವಿ ಟಾಂಗ್ ಕೊಟ್ಟಿದ್ದರು. ಅಪ್ಪನಾಣೆ ಮೋದಿ ಪ್ರಧಾನಿ ಆಗಲ್ಲ ಅಂತಾ ಸಿದ್ದರಾಮಯ್ಯ ಹೇಳಿದ್ದರು. ಆದ್ರೆ ಮೋದಿ 2 ಸಲ ಪ್ರಧಾನಿಯಾದರು. ಸಿದ್ದರಾಮಯ್ಯ ಏನು ಹೇಳುತ್ತಾರೋ ಅದು ಉಲ್ಟಾ ಆಗುತ್ತೆ. 2018ರಲ್ಲಿ ನಾನು ಮತ್ತೆ ಅಧಿಕಾರಕ್ಕೆ ಬಂದೇ ಬರ್ತೀನಿ ಅಂತಾಲೂ ಹೇಳಿದ್ರು.. ಬಂದ್ರಾ..? ಅಂತಾ ಸಿ.ಟಿ ರವಿ ಪ್ರಶ್ನೆ ಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು