ಬೆಂಗಳೂರು ; ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡುತ್ತೇನೆಂದು ಈಗಾಗಲೇ ಘೋಷಣೆ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದಕ್ಕಾಗಿ ಹೊಸ ಕಾರನ್ನೇ ಖರೀದಿ ಮಾಡಿದ್ದಾರೆ. ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಈಗಾಗಲೇ ಗ್ರೀನ್ ಸಿಗ್ನಲ್ ಕೊಟ್ಟಿರುವ ಹಿನ್ನೆಲೆಯಲ್ಲಿ ಹೊಸ ಕಾರಿನಲ್ಲೇ ಯಡಿಯೂರಪ್ಪ ಅವರು ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಸುಮಾರು 1 ಕೋಟಿ ಬೆಲೆ ಬಾಳುವ ಕೆಎ-05- ಎನ್ಡಿ- 4545 ನೊಂದಣಿ ಸಂಖ್ಯೆಯ ಬಿಳಿ ಬಣ್ಣದ ಐಷಾರಾಮಿ ಟಯೋಟಾ ವೆಲ್ಫೈರ್ ಕಾರನ್ನು ಖರೀದಿಸಿದ್ದಾರೆ. ಈಗಾಗಲೇ ಹೊಸ ಕಾರಿನಲ್ಲಿ ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಹೋಗಿ ಬಂದಿದ್ದಾರೆ. ವಿದೇಶ ಪ್ರವಾಸ ಮುಗಿಸಿ ವಾಪಸ್ಸಾದ ಅವರು ವಿಮಾನ ನಿಲ್ದಾಣದಿಂದ ಇದೇ ಕಾರಿನಲ್ಲಿ ಕಾವೇರಿಗೆ ಆಗಮಿಸಿದ್ದರು. 78 ವರ್ಷದ ಯಡಿಯೂರಪ್ಪ ಇದೇ ಕಾರಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ 2023ರ ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡಲಿದ್ದಾರೆ. ಗಣಪತಿ ಹಬ್ಬದ ಬಳಿಕ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇಷ್ಟು ದಿನ ಸರ್ಕಾರದ ಅಧಿಕೃತ ಕಾರನ್ನು ಯಡಿಯೂರಪ್ಪ ಅವರು ಬಳಕೆ ಮಾಡುತ್ತಿದ್ದರು. ಇದಕ್ಕೂ ಮುನ್ನ ಪುತ್ರ ವಿಜಯೇಂದ್ರ ಅವರ ಕಾರನ್ನು ಬಳಕೆ ಮಾಡುತ್ತಿದ್ದರು. 2018ರ ವಿಧಾನಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ ಯಡಿಯೂರಪ್ಪ ಅವರ ಬಳಿ ಯಾವುದೇ ಸ್ವಂತ ಕಾರುಗಳಿಲ್ಲ ಎಂದು ತಿಳಿಸಲಾಗಿತ್ತು.
ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯ ಪ್ರವಾಸಕ್ಕೆ ಸಜ್ಜಾಗುತ್ತಿರುವ ಯಡಿಯೂರಪ್ಪ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.