News Karnataka Kannada
Monday, April 29 2024
ಕರ್ನಾಟಕ

ಸೆ.1ರಿಂದ ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಲಸಿಕೆ ನೀಡಲು ಯೋಜನೆ : ಮುಖ್ಯ ಮಂತ್ರಿ ಬೊಮ್ಮಾಯಿ

Vaccine 17072021
Photo Credit :

ಬೆಂಗಳೂರು, ; ಇದೇ ಸೆಪ್ಟೆಂಬರ್ 1ರಿಂದ ರಾಜ್ಯದಲ್ಲಿರುವ ಅರ್ಹರಿಗೆ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಾಯೋಗಿಕವಾಗಿ ಬುಧವಾರ ಮತ್ತು ಗುರುವಾರ ಎರಡು ಲಕ್ಷ ಸಮೀಪ ಲಸಿಕೆಯನ್ನು ನೀಡಿದ್ದೇವೆ. ಸೆಪ್ಟೆಂಬರ್ 1ರಿಂದ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ನೀಡುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.
5 ಲಕ್ಷ ಲಸಿಕೆ ನೀಡಲು ಸರ್ಕಾರ ಅಗತ್ಯವಾದ ಸಿದ್ದತೆಯನ್ನು ಸಹ ಕೈಗೊಂಡಿದೆ. ಅಧಿಕಾರಿಗಳಿಗೆ ಸೆ.1ರಿಂದಲೇ ಲಸಿಕೆಯನ್ನು ಹೆಚ್ಚಳ ಮಾಡಬೇಕೆಂದು ಸೂಚನೆ ಕೊಡಲಾಗಿದೆ ಎಂದರು. ನಿನ್ನೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ರಾಜ್ಯಕ್ಕೆ ಅಗತ್ಯವಿರುವ ಲಸಿಕೆಯನ್ನು ಪೂರೈಕೆ ಮಾಡುವಂತೆ ಮನವಿ ಮಾಡಿದ್ದೇವೆ. ನಮಗೆ ಅವರಿಂದ ಸೂಕ್ತವಾದ ಸ್ಪಂದನೆ ಸಿಕ್ಕಿದೆ ಎಂದು ಹೇಳಿದರು. ರಾಜ್ಯಕ್ಕೆ ಅಗತ್ಯವಿರುವ ಲಸಿಕೆಗಳನ್ನು ಪೂರೈಕೆ ಮಾಡುವುದಾಗಿ ಭರವಸೆ ಕೊಟ್ಟಿದ್ದಾರೆ. ಜೊತೆಗೆ ಅಗತ್ಯವಿರುವ ಸಿಬ್ಬಂದಿಯನ್ನು ಸಹ ನೀಡುವುದಾಗಿ ಹೇಳಿದ್ದಾರೆ. ಇದರಿಂದ ನಮ್ಮ ಗುರಿಯನ್ನು ತಲುಪಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ವೇಳೆ ರಾಜ್ಯದ ನೆಲ-ಜಲ ವಿಷಯಗಳ ಬಗ್ಗೆ ಚರ್ಚೆಯಾಗಿದೆ. ಮುಖ್ಯವಾಗಿ ಮೇಕೆದಾಟು, ಮಹದಾಯಿ, ಭದ್ರ ಮೇಲ್ದಂಡೆ, ಕೃಷ್ಣ ಮೇಲ್ದಂಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಕೇಂದ್ರದಿಂದ ಸಹಕಾರ ನೀಡುವ ಭರವಸೆಯನ್ನು ಕೊಟ್ಟಿದ್ದಾರೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು