News Karnataka Kannada
Monday, April 29 2024
ಕರ್ನಾಟಕ

ಹಳ್ಳಿಗಳಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಸಿಎಂ ಸೂಚನೆ

Basavaraja Bommai
Photo Credit :

ಬೆಂಗಳೂರು: ಗ್ರಾಮೀಣ ಪ್ರದೇಶಗಳಿಗೆ ತಾರತಮ್ಯವಿಲ್ಲದ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ. ವಿಶೇಷವಾಗಿ ಸೋರಿಕೆ ತಡೆಗಟ್ಟಿ, ಸ್ವಾವಲಂಬನೆ ಜೊತೆಗೆ ಸಮರ್ಪಕ ನಿರ್ವಹಣೆ ಹೆಚ್ಚಿನ ಕಾಳಜಿ ವಹಿಸಬೇಕು. ಕೋವಿಡ್‌ ಸಮಯದಲ್ಲಿ ಆಸ್ಪತ್ರೆಗಳಿಗೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ ವಿದ್ಯುತ್ತನ್ನು ಮಾರಾಟ ಮಾಡುವಂತಾಗಬೇಕು. ಕರ್ನಾಟಕ ವಿದ್ಯುತ್ ನಿಗಮದಿಂದ ವಿದ್ಯುತ್ ಉತ್ಪಾದನೆ ಅತ್ಯಂತ ದಕ್ಷತೆಯಿಂದ ಆಗಬೇಕು. ಜಲ ಮತ್ತು ವಿದ್ಯುತ್ ಘಟಕಗಳು ಅತಿ ಹೆಚ್ಚು ಕಾರ್ಯ ಕ್ಷಮತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಿಸಲಾಗಿರುವ ಬೋರ್ ವೆಲ್ ಗಳಿಗೆ ಯಾವುದೇ ರೀತಿಯ ತಡ ಮಾಡದೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕೋವಿಡ್ ಸಂದರ್ಭದಲ್ಲಿ ವಿಶೇಷವಾಗಿ ಆಸ್ಪತ್ರೆಗಳಿಗೆ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್.ಮಂಜುಳಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು