ಹುಬ್ಬಳ್ಳಿಯ ‘ಉಣಕಲ್’ ಕೆರೆಗೆ ಚನ್ನಬಸವಸಾಗರ ಎಂದು ನಾಮಕರಣ

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಪ್ರಮುಖ ಸ್ಥಳಗಳಿಗೆ ದಾರ್ಶನಿಕರ ಹೆಸರನ್ನು ನಾಮಕರಣ ಮಾಡಲಾಗಿದೆ. ಈ ಪ್ರದೇಶದಲ್ಲಿ ವಾಸಿಸಿ ಇಲ್ಲಿನ ಜನರಿಗೆ ಜೀವನ ಮಾಡಲು ಮಾರ್ಗದರ್ಶನ ನೀಡಿದ್ದ ದಾರ್ಶನಿಕರ ಹೆಸರನ್ನು ನಾಮಕರಣ ಮಾಡಲಾಗಿದೆ.

ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ ಎಂದು ನಾಮಕರಣ ಮಾಡಲಾಗಿತ್ತು, ಈಗ ಉಣಕಲ್ ಕೆರೆಗೆ ಚನ್ನಬಸವಸಾಗರ ಎಂದು ಹೆಸರಿಡಲಾಗಿದೆ.

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಇರುವ ಉಣಕಲ್ ಪ್ರದೇಶದಲ್ಲಿ 750 ಎಕರೆಗಳಲ್ಲಿ ಹರಡಿರುವ ಉಣಕಲ್ ಕೆರೆಯಿದ್ದು, ಅತ್ಯುತ್ತಮ ಪಿಕ್ನಿಕ್ ತಾಣಗಳಲ್ಲಿ ಒಂದಾಗಿದೆ. ಪ್ರತಿದಿನ ನೂರಾರು ಜನರನ್ನು ಆಕರ್ಷಿಸುತ್ತದೆ.

ಹಿಂದೆ, ಹುಬ್ಬಳ್ಳಿ ನಗರಕ್ಕೆ ಈ ಜಲಮೂಲದಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿತ್ತು, ಮಲಪ್ರಭಾ ನದಿ ನೀರಿನ ಯೋಜನೆ ಪ್ರಾರಂಭವಾದ ನಂತರ, ಉಣಕಲ್ ಸರೋವರವನ್ನು ಪಿಕ್ನಿಕ್ ತಾಣವಾಗಿ ಅಭಿವೃದ್ಧಿ ಮಾಡಲಾಯಿತು.

Sneha Gowda

Recent Posts

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

29 seconds ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

19 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

46 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

1 hour ago