ಗುಡ್ಡೆ ಅವ್ವೇರಹಳ್ಳಿ ಬಳಿ ಒಂಟಿ ಸಲಗ ಸೆರೆ: ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ

ಚನ್ನಪಟ್ಟಣ : ತಾಲೂಕಿನ ಗುಡ್ಡೆ ಅವ್ವೇರಹಳ್ಳಿ ಗ್ರಾಮದ ಬಳಿ ಬೀಡುಬಿಟ್ಟಿದ್ದ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಅವ್ವೇರಹಳ್ಳಿ ಗುಡ್ಡದ ಅರಣ್ಯಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಒಂಟಿ ಸಲಗ ಕಾಣಿಸಿಕೊಂಡಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯ ಮತ್ತು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು.
ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಅನೆ ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಂಡರು. ಒಂಟಿಸಲಗವನ್ನು ಸೆರೆಹಿಡಿಯುವ ಉದ್ದೇಶ ದಿಂದ ದುಬಾರೆ ಕ್ಯಾಂಪ್‌ನಿಂದ ನಾಲ್ಕು ಪಳಗಿದ ಆನೆಗಳನ್ನು ಸ್ಥಳಕ್ಕೆ ಕರೆತರಲಾಗಿತ್ತು. ಅರಿವಳಿಕೆ ತಜ್ಞರ ಸಹಾಯ ಹಾಗೂ ಇಲಾಖೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ಒಂಟಿಸಲಗವನ್ನು ಹಿಡಿಯಲಾಯಿತು. ಕೆಲಗಂಟೆ ನಡೆದ ಕಾರ್ಯಾಚರಣೆ ಯಶಸ್ವಿಯಾಗಿ ನೇರವೇರಿತು. ಸೆರೆಸಿಕ್ಕ ಒಂಟಿ ಸಲಗವನ್ನು ಕ್ರೇನ್‌ನ ಸಹಾಯದಿಂದ ಲಾರಿಯಲ್ಲಿ ಹಾಕಿಕೊಂಡು ದುಬಾರೆ ಆನೆಗಳ ಕ್ಯಾಂಪ್‌ಗೆ ರವಾನಿಸಲಾಯಿತು. ಈ ಬಗ್ಗೆ ಪತ್ರಿಕೆಗೆ ತಿಳಿಸಿರುವ ವಲಯ ಅರಣ್ಯಾಧಿಕಾರಿ ದಿನೇಶ್, ಕಾವೇರಿ ವನ್ಯಜೀವಿಧಾಮದಿಂದ ಸುಮಾರು 25 ವರ್ಷದ ಒಂಟಿಸಲಗ ಬಂದಿದೆ. ಭಾನುವಾರ ಸಂಜೆ ಈ ಸಲಗ ಇಗ್ಗಲೂರು ಬಳಿ ಕಾಣಿಸಿಕೊಂಡಿತ್ತು. ರಾತ್ರಿಯಾದ ಕಾರಣ ಇದರ ಸುಳಿವು ಪತ್ತೆಯಾಗಿರಲಿಲ್ಲ.
ಸೋಮವಾರ ಬೆಳಗ್ಗೆ ಅವ್ವೇರಹಳ್ಳಿ ಗುಡ್ಡೆಯಲ್ಲಿ ಇರುವ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಕಾರ್ಯಾಚರಣೆ ನಡೆಸಿ ಒಂಟಿ ಸಲಗವನ್ನು ಸೆರೆಹಿಡಿಯಲಾಯಿತು. ರಾತ್ರಿಯಿಡೀ ಓಡಾಟ ನಡೆಸಿರುವ ಈ ಅನೆಯಿಂದ ಯಾವುದೇ ಅನಾಹುತ ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಸಿಎಫ್ ಹೀರೆಲಾಲ್, ರಾಮನಗರ ಡಿಸಿಎಫ್ ದೇವರಾಜು, ಮಂಡ್ಯ ಡಿಸಿಎಫ್ ರವಿಶಂಕರ್, ವೈದ್ಯರಾದ ಮುಜಾಹಿದ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು. ಕಾರ್ಯಾಚರಣೆ ಮುಗಿಯುವವರೆಗೂ ಡಿವೈಎಸ್‌ಪಿ ಕೆ.ಎನ್.ರಮೇಶ್ ಹಾಗೂ ಎಂ.ಕೆ,ದೊಡ್ಡಿ ಪಿಎಸ್‌ಐ ಸದಾನಂದ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು.

Indresh KC

Recent Posts

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

7 mins ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

11 mins ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

30 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

31 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

53 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

1 hour ago