News Karnataka Kannada
Sunday, April 28 2024
ಬೆಂಗಳೂರು

14 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆ

Rain
Photo Credit :

ಬೆಂಗಳೂರು:ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾ‍ಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ 9 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗದಲ್ಲಿ ಪ್ರಬಲ ವಾಯುಭಾರ ಕುಸಿತದಿಂದಾಗಿ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ನ.8 ಮತ್ತು 9ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಂಧ್ರಪ್ರದೇಶ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮವೂ ರಾಜ್ಯದಲ್ಲಿ ಮಳೆಯಾಗುವ ಲಕ್ಷಣಗಳು ಇವೆ.ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಒಣಹವೆ ಮುಂದುವರಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಭಾನುವಾರ 10 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಸುಳ್ಯ 7, ಪುತ್ತೂರು, ಚಾಮರಾಜನಗರ, ಮಡಿಕೇರಿ 5, ಕಾರ್ಕಳ 3, ಮಂಗಳೂರು, ಸಕಲೇಶಪುರ 2, ಮಂಗಳೂರು, ಕುಂದಾಪುರ, ಕಳಸದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಬೀದರ್‌ನಲ್ಲಿ 14 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು