Categories: ಕರ್ನಾಟಕ

2 ಲಸಿಕೆ ಪಡೆದ 40 ಸಾವಿರ ಜನರಿಗೆ ಮತ್ತೆ ಕೊರೊನಾ ಅಟ್ಯಾಕ್

ತಿರುವಂತಪುರಂ- ಕೊರೊನಾ ವೈರಸ್ ನಿಂದ ಪಾರಾಗಲು ಎರಡು ಡೋಸ್ ವ್ಯಾಕ್ಸಿನ್ ಪಡೆದಿದ್ದೇನೆ. ಎಲ್ಲೆಂದರೆ ಅಲ್ಲಿ ನಿರ್ಭೀತಿಯಿಂದ ಓಡಾಡುತ್ತೇನೆ. ಲಸಿಕೆ ಪಡೆದ ಕಾರಣ ನನಗೆ ಕೊರೊನಾ ಬರಲ್ಲ ಎಂಬ ಹುಂಬತನ ಬೇಡ. ಏಕೆಂದರೆ ಎರಡು ಬಾರಿ ಲಸಿಕೆ ಪಡೆದ ಸುಮಾರು 40 ಸಾವಿರ ಜನರಿಗೆ ಕೊರೊನಾ ಮತ್ತೆ ಅಟ್ಯಾಕ್ ಮಾಡಿದೆ.

ಕೇರಳ ರಾಜ್ಯ ಒಂದರಲ್ಲೆ ಲಸಿಕೆ ಪಡೆದ 40 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ವಕ್ಕರಿಸಿದೆ. ಲಸಿಕೆ ಪಡೆದರೂ ಮತ್ತೆ ಕೊರೊನಾ ಸೋಂಕು ತಗುಲಿರುವುದು ಆತಂಕಕಾರಿಯಾಗಿದೆ. ಇಂತಹ ವ್ಯಕ್ತಿಗಳ ಮಾದರಿಯನ್ನು ಕಳುಹಿಸಿಕೊಡುವಂತೆ ಕೇಂದ್ರ ಸರ್ಕಾರ ಕೇರಳಕ್ಕೆ ಸೂಚನೆ ನೀಡಿದೆ. ಪರಾಮರ್ಷೆ ಮಾಡಿ ಇದಕ್ಕೆ ಕಾರಣವೇನೆಂದು ತಿಳಿಸುವುದಾಗಿ ಎಂದು ಕೇಂದ್ರ ಸರ್ಕಾರ ಕೇರಳಕ್ಕೆ ತಿಳಿಸಿದೆ.
ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಲ್ಲೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಒಟ್ಟು 14,974 ಸೋಂಕಿತರಲ್ಲಿ 5,042 ಜನರು ಎರಡು ಲಸಿಕೆ ಪಡೆದವರಾಗಿದ್ದಾರೆ.

ಎರಡು ಬಾರಿ ಲಸಿಕೆ ಪಡೆದಿದ್ದೇವೆ. ನಮಗೆ ಕೊರೊನಾ ಬರುವುದಿಲ್ಲ ಎಂಬ ಮೊಂಡುತನ ಪ್ರದರ್ಶಿಸಿ ಎಲ್ಲೆಂದರೆ ಅಲ್ಲಿ ಓಡಾಡಿದರೆ ತಕ್ಕ ಪ್ರಾಯಶ್ಚಿತ ಅನುಭವಿಸಬೇಕಾಗುತ್ತದೆ. ಲಸಿಕೆ ಹಾಕಿಸಿಕೊಂಡರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್ ಬಳಕೆ ಮಾಡಬೇಕು.

Indresh KC

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

1 hour ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago