ದ್ವಿತೀಯ ಪಿಯು ಫಲಿತಾಂಶ ಪ್ರಕಟ; ಶೇ 81.15 ಮಂದಿ ಉತ್ತೀರ್ಣ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು(ಏ.10) ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ.

ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ಇನ್ನು ಈ ಬಾರಿ ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್​ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ.  ತುಳಸಿ ಪೈ ಕೆನರಾ ಕಾಲೇಜು ಮಂಗಳೂರು 596 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Ashitha S

Recent Posts

ಮುಂಬೈನಲ್ಲಿ ಹೋರ್ಡಿಂಗ್ ಬಿದ್ದು ಮೂವರು ಸಾವು: 59 ಜನರಿಗೆ ಗಾಯ

ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…

10 mins ago

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

33 mins ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು…

45 mins ago

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಸಾಧನೆ: ನೂರು ಶೇಕಡಾ ಫಲಿತಾಂಶ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…

53 mins ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

2 hours ago

ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಯುವಕನೊಬ್ಬನಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಣ್ಣೂರ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.

2 hours ago