News Karnataka Kannada
Wednesday, April 24 2024
Cricket
ಕರ್ನಾಟಕ

3 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

Photo Credit :

3 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ಚಾಮರಾಜನಗರ: ಜಿಲ್ಲೆಯಲ್ಲಿ ಗಾಂಜಾ ವಿರುದ್ಧದ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಪೊಲೀಸರು, ಭಾನುವಾರ ಕೃಷಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯೊಬ್ಬನನ್ನು ಬಂದಿಸಿದ್ದಾರೆ.

ಅಂದಾಜು 3 ಲಕ್ಷ ಮೌಲ್ಯದ 26.880 ಕೆ.ಜಿ ಮೌಲ್ಯದ ಗಾಂಜಾ ಸೊಪ್ಪು ವಶ ಪಡಿಸಿಕೊಂಡಿದ್ದಾರೆ.

ಈ ಕುರಿತು ಇಂದು ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಎಸ್‌ ಪಿ ದಿವ್ಯ ಸಾರಾ ಥಾಮಸ್‌ ಅವರು ಸಂತೇಮರಹಳ್ಳಿ ಹೋಬಳಿಯ ಶನಿವಾರ ಮುಂಟಿ ಗ್ರಾಮದ ಜಡೇಗೌಡ ಅಲಿಯಾಸ್‌ ಮಾರಕುನ್ನ(40) ಎಂಬಾತನನ್ನು ಬಂಧಿಸಲಾಗಿದ್ದು ಇನ್ನೊಬ್ಬ ಆರೋಪಿ ಬೆಲವತ್ತ ಗ್ರಾಮದ ಮಾದಯ್ಯ ಎಂಬುವವರು ತಲೆಮರೆಸಿಕೊಂಡಿದ್ದಾರೆ.

ಗ್ರಾಮದ ಬಳಿಯ ಸರ್ವೆ ನಂಬರ್‌ 312ರಲ್ಲಿ ಆರೋಪಿಗಳು 134 ಗಾಂಜಾ ಗಿಡಗಳನ್ನು ಬೆಳೆಸಿದ್ದು, ಪೊಲೀಸರು ಭಾನುವಾರ ದಾಳಿ ನಡೆಸಿ ಅಂದಾಜು 3 ಲಕ್ಷ ಮೌಲ್ಯದ 26.880 ಕೆ.ಜಿ ಮೌಲ್ಯದ ಗಾಂಜಾ ಸೊಪ್ಪು ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಕೃಷಿ ಚಟುವಟಿಕೆ ನಡೆಸದೇ ಪಾಳು ಬಿಟ್ಟಿದ್ದ ಜಮೀನಿನ ಕಾಡು ಗಿಡಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆಯಲಾಗಿದ್ದು ಬಂಧಿತ ಆರೋಪಿ ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯ ಸಾರಾ ಥಾಮಸ್‌ ತಿಳಿಸಿದರು. ಜಮೀನಿನ ಮಾಲೀಕ ತಮಿಳುನಾಡಿನವರೆಂದು ಹೇಳಲಾಗಿದ್ದು . ನಾವು ತನಿಖೆ ನಡೆಸುತ್ತಿದ್ದೇವೆ. ಶೀಘ್ರದಲ್ಲಿ ಗೊತ್ತಾಗಲಿದೆ’ ಎಂದು ಹೇಳಿದರು.

‘ಗೃಹ ಸಚಿವರ ಆದೇಶದ ಅನುಸಾರ ಜಿಲ್ಲೆಯಲ್ಲಿ ಗಾಂಜಾ ವಿರುದ್ಧ ತೀವ್ರ ಕಾರ್ಯಾಚರಣೆ ಆರಂಭಿಸಲಾಗಿದೆ. ಹನೂರು ತಾಲ್ಲೂಕಿನ ರಾಮಾಪುರ, ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಗಾಂಜಾ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಬೆಂಗಳೂರು, ಮೈಸೂರು ಮುಂತಾದ ಕಡೆಗಳಿಗೆ ಪೂರೈಕೆಯಾಗುತ್ತಿದೆ ಎಂಬ ಮಾಹಿತಿಯೂ ಇದೆ. ಇಲ್ಲಿಂದ ಸರಬರಾಜು ಆಗುತ್ತಿರುವುದನ್ನು ತಡೆಯುವುದು ನಮ್ಮ ಗುರಿ’ ಎಂದು ಹೇಳಿದರು.

‘ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆಯ ಸಹಕಾರ ಪಡೆದು ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿ ಜಿಲ್ಲಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಈಗಾಗಲೇ ಬಿಆರ್‌ಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಮಲೆಮಹದೇಶ್ವರ ವನ್ಯಧಾಮದ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕಾಗಿದೆ’ ಎಂದು ದಿವ್ಯ ಸಾರಾ ಥಾಮಸ್‌ ಹೇಳಿದರು. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್‌ಪಿ ನಗದು ಬಹುಮಾನ ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು