News Karnataka Kannada
Sunday, April 14 2024
Cricket
ಕರ್ನಾಟಕ

34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಸಚಿವ ಕೆ.ಎಸ್.ಈಶ್ವರಪ್ಪ

Photo Credit :

34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

 

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಾಲಿಕತ್ವದ ಜಮೀನಿನಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ ಕುಟುಂಬಗಳಿಗೆ ಸ್ವಂತ ಸೂರಿನ ಮಾಲಿಕತ್ವ ಹೊಂದಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಈಗಾಗಲೇ ಹಕ್ಕುಪತ್ರ ನೀಡಲು ಆದೇಶ ಹೊರಡಿಸಿದೆ. 

 

ಈ ಹಕ್ಕುಪತ್ರಗಳನ್ನು ವಿತರಿಸಲು ಈ ಹಿಂದೆ ನಿಗದಿಪಡಿಸಿದ್ದ ದರವನ್ನು ಸಹ ಸರ್ಕಾರ ಕಡಿಮೆ ಮಾಡಿದೆ. ಅದರಂತೆ ಪುರುಸಭೆ ಮತ್ತು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 1200 ಚದರ ಅಡಿಗಳಿಗೆ ಮೀರದಂತೆ ರೂ. 2ಸಾವಿರ ಹಾಗೂ ಪ.ಜಾತಿ, ಪಂಗಡ ಮತ್ತು ಅಂಗವಿಕಲರಿಗೆ 1ಸಾವಿರ ರೂ. ನಿಗದಿಪಡಿಸಲಾಗಿದೆ. ನಗರ ಸಭೆ ವ್ಯಾಪ್ತಿಯಲ್ಲಿ 600 ಚದರ ಅಡಿಗಳಿಗೆ ಮೀರದಂತೆ ರೂ. 2 ಸಾವಿರ ಹಾಗೂ 1ಸಾವಿರ ನಿಗದಿಪಡಿಸಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 600 ಚದಡ ಅಡಿಗಳಿಗೆ ಮೀರದಂತೆ 4ಸಾವಿರ ರೂ. ಹಾಗೂ ಪ.ಜಾತಿ, ಪಂಗಡ, ಅಂಗವಿಕಲರಿಗೆ 2ಸಾವಿರ ದರ ನಿಗದಿಪಡಿಸಲಾಗಿದೆ ಎಂದು ಹೇಳಿದರು.

 

ಶಿವಮೊಗ್ಗ ನಗರದಲ್ಲಿ ಘೋಷಿತ ಕೊಳಚೆ ಪ್ರದೇಶಗಳಲ್ಲಿರುವ 5531 ಕುಟುಂಬಗಳ 26732 ನಿವಾಸಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಮಹಾನಗರ ಪಾಲಿಕೆ ಮತ್ತು ಇತರ ಸರ್ಕಾರಿ ಇಲಾಖೆಗಳ ಜಮೀನುಗಳಲ್ಲಿರುವ ಈ ಕೊಳಚೆ ಪ್ರದೇಶಗಳ ಜಮೀನನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಒಂದು ತಿಂಗಳ ಒಳಗಾಗಿ ಹಸ್ತಾಂತರಿಸಿ ಶೀಘ್ರ ಹಕ್ಕುಪತ್ರ ನೀಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

 

ಇದರಿಂದ ಕೊಳಗೇರಿ ನಿವಾಸಿಗಳ ದಶಕಗಳ ಕನಸು ನನಸಾಗಲಿದ್ದು, ಇದೇ ರೀತಿ ಜಿಲ್ಲೆಯ ಇತರ ತಾಲೂಕುಗಳಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ 13,943 ಕುಟುಂಬಗಳಿಗೆ ಸಹ ಹಕ್ಕುಪತ್ರ ನೀಡಲು ಸಿದ್ಧತೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

 

ಮುಂದಿನ ಹಂತದಲ್ಲಿ ಖಾಸಗಿ ಜಮೀನುಗಳಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸವಾಗಿರುವವರಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 

ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಕಾರ್ಯಾರಂಭ:

 

ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಕಾರ್ಯಪಡೆ ಕರೋನಾ ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

 

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದ ಈ ಕಾರ್ಯಪಡೆಯಲ್ಲಿ ಪಿಡಿಒ ಸದಸ್ಯ ಕಾರ್ಯದರ್ಶಿಯಾಗಿದ್ದು, ಪೊಲೀಸ್ ಇಲಾಖೆ, ಶಿಕ್ಷಣ, ಕಂದಾಯ, ಆರೋಗ್ಯ ಇಲಾಖೆ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಮತ್ತು ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು ಇದ್ದಾರೆ. ಹೊಂ ಕ್ವಾರೆಂಟೈನ್ ಬಗ್ಗೆ ನಿಗಾ ವಹಿಸಲು ರಚಿಸಲಾಗಿದ್ದ ಗ್ರಾಮ ಪಂಚಾಯತ್ ಹೆಲ್ಪ್ ಡೆಸ್ಕ್‍ಗಳು ಇನ್ನು ಮುಂದೆ ಸಮುದಾಯ ಸಹಾಯವಾಣಿಗಳಾಗಿ ಕಾರ್ಯ ನಿರ್ವಹಿಸಲಿವೆ ಎಂದರು.

 

ಗ್ರಾಮಾಂತರ ಪ್ರದೇಶಗಳಿಗೆ ಹಿಂತಿರುವ ವಲಸೆ ಕಾರ್ಮಿಕರಿಗೆ ಮತ್ತಿತರರಿಗೆ ನರೇಗಾ ಅಡಿಯಲ್ಲಿ ಉದ್ಯೋಗ ಒದಗಿಸುವುದು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೋವಿಡ್ ತಡೆಗಟ್ಟಲು ಕಾರ್ಯನಿರ್ವಹಿಸುವ ಸ್ವಯಂ ಸೇವಕರನ್ನು ಗುರುತಿಸಿ, ಪಾಳಿ ವ್ಯವಸ್ಥೆಯಲ್ಲಿ ಅವರ ಸೇವೆ ಪಡೆಯುವುದು, ಸಮುದಾಯ ಸಹಾಯವಾಣಿ ಆರಂಭಿಸುವುದು, ಅವಶ್ಯ ಮಾಸ್ಕ್, ಸಾಬೂನು ಮತ್ತು ಸ್ಯಾನಿಟೈಸರ್, ಸ್ವಚ್ಛತಾ ಪರಿಕರಗಳನ್ನು ಖರೀದಿಸಲು ಗ್ರಾಮ ಪಂಚಾಯತ್‍ಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

 

ಅನುದಾನ ಮಂಜೂರು: ನರೇಗಾ ಯೋಜನೆಯಡಿ ಕಳೆದ ಸಾಲಿನಲ್ಲಿ ಬಾಕಿ ಇದ್ದ 89 ಕೋಟಿ ರೂ ಮತ್ತು ಪ್ರಸ್ತುತ ಸಾಲಿನ 284ಕೋಟಿ ರೂ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ 77ಕೋಟಿ ರೂ. ಕೂಲಿ ಮೊತ್ತವನ್ನು ಫಲಾನುಭವಿಗಳಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು