Bengaluru 30°C
Ad

ರಾಜ್ಯದಲ್ಲಿ ಕೇವಲ 24 ಗಂಟೆಯಲ್ಲೇ ಅಪಘಾತಕ್ಕೆ 51 ಮಂದಿ ಸಾವು : ಎಡಿಜಿಪಿ ಅಲೋಕ ಕುಮಾರ್​

ರಾಜ್ಯದಲ್ಲಿ ಕಳೆದ 24 ತಾಸಿನ ಅವಧಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 51 ಜನರು ಬಲಿಯಾಗಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ವರದಿಯಾದ ಅತಿ ಹೆಚ್ಚು ಪ್ರಮಾಣದ ಸಾವುಗಳಾಗಿವೆ.

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ತಾಸಿನ ಅವಧಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 51 ಜನರು ಬಲಿಯಾಗಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ವರದಿಯಾದ ಅತಿ ಹೆಚ್ಚು ಪ್ರಮಾಣದ ಸಾವುಗಳಾಗಿವೆ.

ಹಾಸನ ಜಿಲ್ಲೆಯ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಘಟನೆ ಸಂಬಂಧ ತಮ್ಮ ‘ಎಕ್ಸ್‌’ ಜಾಲತಾಣದ ಖಾತೆಯಲ್ಲಿ ರಾಜ್ಯ ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಪೋಸ್ಟ್ ಮಾಡಿದ್ದು, ಅಪಘಾತಗಳಲ್ಲಿ ಸಾವಿನ ಪ್ರಮಾಣ ಏರಿಕೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ

ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಬಗ್ಗೆ ಟ್ವೀಟ್​ ಮಾಡಿದ ಅವರು, “ಭಾನುವಾರ ಹಾಸನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 51 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಪೈಕಿ ಹಲವು ಪ್ರಕರಣಗಳು ಅತಿ ವೇಗ ಹಾಗೂ ಅಜಾಗರೂಕ ಚಾಲನೆಯಿಂದ ಸಂಭವಿಸಿದೆ. ರಸ್ತೆ ಸುರಕ್ಷತೆಗೆ ಎಲ್ಲ ಪಾಲುದಾರರಿಂದ ಜವಾಬ್ದಾರಿಯುತ ನಡವಳಿಕೆಯ ಅಗತ್ಯವಿದೆ” ಎಂದರು.

 

Ad
Ad
Nk Channel Final 21 09 2023
Ad