ಹೊಸಕೋಟೆ: ಹೆದ್ದಾರಿಯಲ್ಲಿ‌ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಜೀವಬಿಟ್ಟಿರೋ ಘಟನೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ. ಕೇಶವರೆಡ್ಡಿ ( 44 ) ತುಳಸಿ ( 21 ) ಪ್ರಣತಿ ( 4 ) ಮೃತ ದುರ್ದೈವಿಗಳು.

ಆಂಧ್ರದಿಂದ ಬೆಂಗಳೂರಿಗೆ ಸಾರಿಗೆ ಬಸ್​ನಲ್ಲಿ ಪ್ರಯಾಣಿಕರು ಬರುತ್ತಿದ್ದರು. ಆಗ ಬಸ್​ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಮೂವರು ಜೀವಬಿಟ್ಟಿದ್ದು, 16 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ನಿದ್ದೆ ಮಂಪರಿನಲ್ಲಿ ಓವರ್​ ಟೇಕ್ ಮಾಡಲು ಹೋಗಿ ಬಸ್ ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.