Bengaluru 28°C
Ad

ತಿರುಪತಿ ಲಡ್ಡು ಪ್ರಕರಣ: ನಂದಿನಿ ಉತ್ಪನ್ನಗಳಿಗೆ ಈಗ ಬಹು ಬೇಡಿಕೆ

Nandini Milk

ಬಳ್ಳಾರಿ: ತಿರುಪತಿ ಲಡ್ಡು ವಿವಾದ ಪರೋಕ್ಷವಾಗಿ ಕರ್ನಾಟಕದ ಕೆಎಂಎಫ್​ನ ನಂದಿನಿ ಬ್ರ್ಯಾಂಡ್​​​ಗೆ ನೆರವಾದಂತೆ ಕಾಣುತ್ತದೆ . ತಿರುಪತಿ ಲಡ್ಡು ವಿವಾದದ ಬಳಿಕ ನಂದಿನಿ ಹಾಲು ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಜತೆಗೆ, ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲೂ ಸೂಚನೆ ನೀಡಿತ್ತು. ಇದರಿಂದಾಗಿ ನಂದಿನಿ ಹಾಲು ಮತ್ತು ಹಾಲಿನ‌ ಉತ್ಪನ್ನಗಳ ಬೇಡಿಕೆ ಹೆಚ್ಚಳವಾಗಿದೆ.

ಮತ್ತೊಂದೆಡೆ, ಕಲಬೆರಕೆ ತುಪ್ಪ ಮತ್ತು ಹಾಲಿನ ಉತ್ಪನ್ನಗಳ ಆತಂಕದಿಂದಾಗಿ ಜನರಲ್ಲಿಯೂ ನಂದಿನಿ ಹಾಲು ಮತ್ತು ನಂದಿನಿ ಉತ್ಪನ್ನಗಳ ಮೇಲೆ ಒಲವು ಹೆಚ್ಚಾಗಿದೆ ಎಂದು ನಂದಿನಿ ಮೂಲಗಳು ತಿಳಿಸಿವೆ. ಇದೀಗ ನಂದಿನಿ ಏಜೆನ್ಸಿಗಳನ್ನು ತೆರೆಯಲು ಅರ್ಜಿ ಸಲ್ಲಿಸುವರರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಬಳ್ಳಾರಿ ರಾಬಕೋವಿ ಹಾಲು ಒಕ್ಕೂಟದ ಎಂಡಿ ಪೀರ‍್ಯಾ ನಾಯ್ಕ್ ತಿಳಿಸಿದ್ದಾರೆ. ಬೇಡಿಕೆ ಎಷ್ಟು ಹೆಚ್ಚಾದರೂ ಪೂರೈಕೆ ಮಾಡಲು ನಾವು ಸಿದ್ಧರಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Ad
Ad
Nk Channel Final 21 09 2023