Bengaluru 29°C
Ad

ಲವ್ ಜಿಹಾದ್; ನಾಪತ್ತೆಯಾದ ಹಿಂದೂ ಯುವತಿ ಮುಸ್ಲಿಂ ಯುವಕನ ಮದುವೆಯಾಗಿ ಪತ್ತೆ

Love Jihad

ಕಾಸರಗೋಡು: ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಮಾಡಿದೆ. ಮಂಗಳೂರು ಗಡಿ ಕಾಸರಗೋಡಿನಲ್ಲಿ ಹಿಂದೂ ಯುವತಿಯ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಲವ್ ಜಿಹಾದ್ ಗೆ ಮುಸ್ಲಿಂ ಲೀಗ್ ನಾಯಕನಿಂದ ಬೆಂಬಲ ನೀಡಿದ್ದಾರೆ ಎಂದು ಕಾಸರಗೋಡಿನ ವಿಎಚ್ ಪಿ ಸೇರಿ ಹಿಂದೂ ಪರ ಸಂಘಟನೆಗಳು ಆರೋಪಿಸಿವೆ.

ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದ ಯುವತಿ ನೇಹಾ, ಮುಸ್ಲಿಂ ಯುವಕ ಮಿರ್ಶಾದ್ ಎಂಬಾತನ ಜೊತೆ ತೆರಳಿದ್ದಳು. ಸದ್ಯ ಪೊಲೀಸರ ಮುಂದೆ ಪ್ರತ್ಯಕ್ಷಳಾಗಿರುವ ಈಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಸ್ವಇಚ್ಛೆಯಿಂದ ಯುವಕನ ಜೊತೆ ತೆರಳಿದ್ದೇನೆ ಎಂದು ಆಕೆ ಹೇಳಿದ್ದಾಳೆ.

ಆದರೆ ಈ ʼಲವ್ ಜಿಹಾದ್ʼ ಹಿಂದೆ ಕೇರಳದ ಮುಸ್ಲಿಂ ಲೀಗ್ ನೇತಾರನ ಷಡ್ಯಂತ್ರವಿದೆ; ಮುಸ್ಲಿಂ ಲೀಗ್ ನೇತಾರನೊಬ್ಬ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾನೆ. ಆ ನೆಪದಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂಚು ರೂಪಿಸಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

ನೇಹಾಳ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು ನಾಪತ್ತೆ ಕೇಸು ದಾಖಲಿಸಿದ್ದರು. ದೂರಿನಲ್ಲಿ, ಪೋಷಕರು ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಿದ್ದರು. ಮೇ.23ರಂದು ಮನೆಯಿಂದ ಹೊರಟ ನೇಹಾ ದಿಢೀರ್ ನಾಪತ್ತೆಯಾಗಿದ್ದಳು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿದೆ. ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿದ್ದ ನೇಹಾ ಮತ್ತು ಮಿರ್ಶಾದ್, ಮದುವೆಯಾಗಿ ಮೇ.27ರಂದು ಬದಿಯಡ್ಕ ಠಾಣೆಗೆ ಹಾಜರಾಗಿದ್ದರು.

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಲವ್ ಜಿಹಾದ್ ಸಕ್ರಿಯವಾಗಿದೆ. ಆರ್ಥಿಕವಾಗಿ ಹಿಂದುಳಿದ ಹಿಂದೂ ಯುವತಿಯರನ್ನು ಆಡಂಬರದ ಬದುಕಿನ ಆಮಿಷ ತೋರಿಸಿ ಲವ್ ಜಿಹಾದ್‌ನ ಜಾಲಕ್ಕೆ ಸಿಲುಕಿಸಲಾಗುತ್ತಿದೆ. ಹಿಂದೂ ಯುವತಿಯರ ಲವ್ ಜಿಹಾದ್, ಮತಾಂತರಕ್ಕೆ ಮುಸ್ಲಿಂ ಲೀಗ್ ಕುಮ್ಮಕ್ಕು ನೀಡುತ್ತಿದೆ. ಲವ್ ಜಿಹಾದ್‌ಗೆ ಬದಿಯಡ್ಕ ಪೊಲೀಸರು ಸಹ ಸಾಥ್ ನೀಡುತ್ತಿದ್ದಾರೆ ಎಂದು ವಿಎಹಿಂಪ, ಭಜರಂಗದಳ ಹಾಗೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ

Ad
Ad
Nk Channel Final 21 09 2023
Ad