ಕೋಲ್ಕತಾ: ಮಹಿಳೆ ಮತ್ತು ಮಕ್ಕಳ ಸುರಕ್ಷತೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಐತಿಹಾಸಿಕ ಹೆಜ್ಜೆ ಇಟ್ಟಿದೆ.ಇಂದು ಬಂಗಾಳ ವಿಧಾನ ಸಭೆಯಲ್ಲಿ ಆ್ಯಂಟಿ ರೇಪ್ ಬಿಲ್ ಪಾಸ್ ಆಗಿದೆ. ಅಪರಾಜಿತ ಮಹಿಳಾ ಮತ್ತು ಮಕ್ಕಳ ಬಿಲ್ 2024 ಕಾಯ್ದೆಯನ್ನು ಇಂದು ರಾಜ್ಯ ಕಾನೂನು ಸಚಿವ ಮೊಲೊಯ್ ಘಾಚಕ್ ಮಂಡಿಸಿದ್ದರು. ಆರೋಪ ಸಾಬೀತಾದ ಬಳಿಕ ಅತ್ಯಾಚಾರಿಗಳಿಗೆ 10 ದಿನದಲ್ಲಿ ಗಲ್ಲು ಶಿಕ್ಷೆ ವಿಧಿಸಲು ಈ ಬಿಲ್ ಅನುಮತಿಸುತ್ತದೆ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಭಾರತದಲ್ಲಿ ಇದೇ ಮೊದಲಾಗಿ ಪಶ್ಚಿಮ ಬಂಗಾಳ ಜಾರಿಗೆ ತರಲು ನಿರ್ಧರಿಸಿದೆ.
ಬಂಗಾಳ ವಿಧಾನಸಭೆಯಲ್ಲಿ ಈ ಮಸೂದೆಗೆ ಪಾಸ್ ಆಗಿದೆ. ಇದೀಗ ಮೇಲ್ಮನೆಯಲ್ಲಿ ಈ ಬಿಲ್ ಸೆಪ್ಟೆಂಬರ್5ರಂದು ಮಂಡನೆಯಾಗಲಿದೆ. ಬಳಿಕ ರಾಜ್ಯಪಾಲರ ಅಂಕಿತದೊಂಂದಿಗೆ ಜಾರಿಗೆ ಬರುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ. ಈ ಬಿಲ್ ಸೆಪ್ಟೆಂಬರ್ 5ರಿಂದ ಬಂಗಾಳದಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ .ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಮತಾ ಬ್ಯಾನರ್ಜಿ ಸರ್ಕಾರ ಇದೀಗ ಐತಿಹಾಸಿಕ ಬಿಲ್ ಪಾಸ್ ಮಾಡಿ ಅತ್ಯಾಚಾರಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಲು ಮುಂದಾಗಿದೆ.

