ಬಾಗಲಕೋಟೆ : ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲೊಂದು ಅಮಾನವೀಯ ಘಟನೆ ನಡೆದಿದ್ದು ಪೆಟ್ರೋಲ್ ಸುರಿದು ತಗಡಿನ ಶೆಡ್ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದು ಘಟನೆಯಲ್ಲಿ ತಾಯಿ-ಮಗಳು ಸಜೀವ ದಹನವಾಗಿದ್ದಾರೆ . ಹಾಗೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ತೋಟದಲ್ಲಿದ್ದ ತಗಡಿನ ಶೆಡ್ಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಇಟ್ಟು ದುಷ್ಕೃತ್ಯ ಮೆರೆದಿದ್ದಾರೆ. ಬೆಳಗಲಿ ಗ್ರಾಮದ ಜೈಬಾನ್(55), ಶಬಾನ್(25) ಎಂಬ ತಾಯಿ-ಮಗಳು ಬೆಂಕಿಯಲ್ಲಿ ಸುಟ್ಟು ಪ್ರಾಣ ಕಳೆದುಕೊಂಡಿದ್ದಾರೆ.
ಇನ್ನು ದಸ್ತಗಿರಿಸಾಬ್, ಸುಬಾನ್ಗೆ ಸುಟ್ಟ ಗಾಯಗಳಾಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಿದ್ದಿಕ್ಕಿ ಎಂಬ ಯುವಕ ಪೆಟ್ರೋಲ್ ವಾಸನೆ ಬರುತ್ತಿದೆ ಎಂದು ಹೊರ ಬಂದು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾನೆ. ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು, ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ

