Ad

ವಿಷಕಾರಿ ಬೀಜವಿರುವ ಕಾಡುಹಣ್ಣು ತಿಂದು 8 ಮಕ್ಕಳು ಅಸ್ವಸ್ಥ!

ವಿಷಕಾರಿ ಬೀಜ ತಿಂದು ಎಂಟು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದಿದೆ. 

ಬಳ್ಳಾರಿ: ವಿಷಕಾರಿ ಬೀಜ ತಿಂದು ಎಂಟು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದಿದೆ.

ಶಾಲಾ ವಿರಾಮದ ಸಮಯದಲ್ಲಿ ಮಕ್ಕಳು ವಿಷಕಾರಿ ಬೀಜವಿರುವ ಕಾಡುಹಣ್ಣು ಸೇವಿಸಿದ್ದಾರೆ. ತೆಕ್ಕಲಕೋಟೆಯ ವಾಲ್ಮೀಕಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಬೀಜ ಸೇವನೆ ಬಳಿಕ ಅಸ್ವಸ್ಥಗೊಂಡಿದ್ದಾರೆ.

ಎಂಟು ಮಕ್ಕಳಲ್ಲಿ ವಿಷಕಾರಿ ಬೀಜ ಸೇವನೆ ಬಳಿಕ ವಾಂತಿ ಭೇದಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ವಿಮ್ಸ್‌ನಲ್ಲಿ ಎಲ್ಲ ಮಕ್ಕಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗಿದೆ.

ಒಂದು ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದು, ಇನ್ನುಳಿದ ಮಕ್ಕಳು ಚಿಕಿತ್ಸೆ ಬಳಿಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಪೂರ್ಣ ಚಿಕಿತ್ಸೆ ಹಾಗೂ ಅಬ್ಸರ್ವೇಷನ್ ಮಾಡಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ವಿಮ್ಸ್ ನಿರ್ದೇಶಕ ಡಾ. ಗಂಗಾಧರ ಗೌಡ ಅವರು ಮಾಹಿತಿ ನೀಡಿದ್ದಾರೆ.

Ad
Ad
Nk Channel Final 21 09 2023