Bengaluru 19°C

ಶೆಡ್‌ಗೆ ಆಕಸ್ಮಿಕ ಬೆಂಕಿ: 40ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಕುರಿ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 40ಕ್ಕೂ ಹೆಚ್ಚು ಕುರಿಗಳು ಬೆಂಕಿಗೆ ಆಹುತಿಯಾದ ಘಟನೆ ವಿಜಯನಗರದ ಅಮಲಾಪುರ ಗ್ರಾಮದಲ್ಲಿ ನಡೆದಿದೆ.

ಬಳ್ಳಾರಿ: ಕುರಿ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 40ಕ್ಕೂ ಹೆಚ್ಚು ಕುರಿಗಳು ಬೆಂಕಿಗೆ ಆಹುತಿಯಾದ ಘಟನೆ ವಿಜಯನಗರದ ಅಮಲಾಪುರ ಗ್ರಾಮದಲ್ಲಿ ನಡೆದಿದೆ.


ಅಗಸರ ಶೇಖರಪ್ಪ ಎಂಬ ರೈತರಿಗೆ ಸೇರಿದ ಕಣಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕಣದಿಂದ ಪಕ್ಕದಲ್ಲಿದ್ದ ಕುರಿಗಳನ್ನು ಕಟ್ಟಿ ಹಾಕಿದ್ದ ಶೆಡ್‌ಗೆ ಸಹ ಬೆಂಕಿ ತಗುಲಿದೆ. ಘಟನೆ ವೇಳೆ ಯಾರು ಇಲ್ಲದೇ ಇದ್ದಿದ್ದರಿಂದ ಎಲ್ಲಾ ಕುರಿಗಳು ಸಾವನ್ನಪ್ಪಿವೆ.


ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದರೂ ಕುರಿಗಳನ್ನು ಬದುಕಿಸಲು ಸಾಧ್ಯವಾಗಿಲ್ಲ. 4 ಲಕ್ಷ ರೂ.ಗೂ ಹೆಚ್ಚು ಬೆಲೆ ಬಾಳುವ ಕುರಿಗಳನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.


Nk Channel Final 21 09 2023