ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅನ್ನು ಜೂನ್ 11 ರಂದು ಬಂಧಿಸಲಾಗಿತ್ತು. 14 ದಿನಗಳ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಆಗಿನಿಂದಲೂ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ ದರ್ಶನ್. ಜೈಲಿನ ಊಟ, ಏಕಾಂಗಿತನದಿಂದ ದರ್ಶನ್ ದೇಹತೂಕ ಕಳೆದುಕೊಂಡಿದ್ದಾರೆ. ಜೈಲಿಗೆ ಹೋಗುವ ಮುಂಚೆ ಇದ್ದ ತೂಕಕ್ಕಿಂತಲೂ ಸುಮಾರು 15 ಕೆಜಿ ತೂಕವನ್ನು ನಟ ದರ್ಶನ್ ಕಳೆದುಕೊಂಡಿದ್ದಾರೆ. ಜೈಲಿಗೆ ಹೋಗುವಾಗ ದರ್ಶನ್ ಇದ್ದ ತೂಕಕ್ಕೂ ಮೊಮ್ಮೆ ಬಳ್ಳಾರಿ ಜೈಲಿಗೆ ಬಂದಾಗ ಮತ್ತೆ ತೂಕ ಹಾಕಲಾಗಿದ್ದು, ಎರಡರ ನಡುವೆ ಅಂತರ 15 ಕೆಜಿ ಇದೆ.
ಇನ್ನು ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಬಗ್ಗೆ ಜೈಲು ಅಧಿಕಾರಿಗಳ ಬಳಿ ಚಿಕಿತ್ಸೆ ಹಾಗೂ ಕೆಲವು ಸೌಲಭ್ಯಗಳಿಗೆ ಮನವಿ ಮಾಡಿದ್ದಾರೆ. ಬೆನ್ನು ನೋವಿರುವ ಕಾರಣ, ಭಾರತೀಯ ಶೈಲಿಯ ಶೌಚಾಲಯ ಬಳಸಲಾಗದು, ಪಾಶ್ಚಾತ್ಯ ಶೈಲಿಯ ಟಾಯ್ಲೆಟ್ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಐಜಿ ಶೇಷಾ ಅವರು, ಬೆನ್ನು ನೋವಿಗೆ ಜೈಲು ವೈದ್ಯರೇ ಚಿಕಿತ್ಸೆ ನೀಡಲಿದ್ದಾರೆ. ಬೆನ್ನು ನೋವಿನ ಈ ಹಿಂದಿನ ಚಿಕಿತ್ಸೆಗಳ ಮಾಹಿತಿ ಕೇಳಿದ್ದೇವೆ ಅದನ್ನು ಪರಿಶೀಲಿಸಿ ಜೈಲಿನ ವೈದ್ಯರೇ ಚಿಕಿತ್ಸೆ ನೀಡಲಿದ್ದಾರೆ ಎಂದಿದ್ದಾರೆ

