Bengaluru 22°C
Ad

ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ: ಆರೋಪಿ ಪೊಲೀಸರ ವಶಕ್ಕೆ

ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಸಿಂಧನೂರ ಗ್ರಾಮದಲ್ಲಿ ನಡೆದಿದೆ.

ಬಳ್ಳಾರಿ: ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಸಿಂಧನೂರ ಗ್ರಾಮದಲ್ಲಿ ನಡೆದಿದೆ.

ಬಿಹಾರ ಮೂಲದ ಆರೋಪಿ ಕಪಾಲ್ ಪಾಸ್ವಾನಿ (38) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಕಪಾಲ್ ಗೂಡಂಗಡಿಯಲ್ಲಿ ಚಾಕೊಲೇಟ್​ ಮಾಡುತ್ತಿದ್ದನು.​​​​

ಈ ಖಚಿತ ಮಾಹಿತಿ ಮೇರೆಗೆ ಅಬಕಾರಿ ಸಿಬ್ಬಂದಿಗಳು ಗೂಡಂಗಡಿಗೆ ದಾಳಿ ಮಾಡಿದ್ದು,  2,600 ಮೌಲ್ಯದ ಗಾಂಜಾ ಮಿಶ್ರಿತ ಚಾಕೊಲೇಟ್ ಜಪ್ತಿ ಮಾಡಲಾಗಿದೆ. ಪ್ರಕರಣ ಸಿರಗುಪ್ಪ ಅಬಕಾರಿ ಪೋಲಿಸ್ ಠಾಣೆಯಲ್ಲಿ  ದಾಖಲಾಗಿದೆ.

Ad
Ad
Nk Channel Final 21 09 2023
Ad