ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ರನ್ನು ನೋಡಲು 2ನೇ ಬಾರಿ ಬಳ್ಳಾರಿ ಜೈಲಿಗೆ ಇಂದು ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.
ಚಾರ್ಜ್ಶೀಟ್ ಸಲ್ಲಿಕೆಯ ಬಳಿಕ ದರ್ಶನ್ ಭೇಟಿಗೆ ದಿನಕರ್ ತೂಗುದೀಪ್ ಜೊತೆ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ, ಹೈ ಸೆಕ್ಯೂರಿಟಿ ಸೆಲ್ನಿಂದ ಹೊರಬಂದ ಆರೋಪಿ ದರ್ಶನ್ ಪತ್ನಿ ಮತ್ತು ಸಹೋದರನನ್ನು ನೋಡಿ ಭಾವುಕರಾಗಿದ್ದಾರೆ.
ಈ ವೇಳೆ, ಬಳ್ಳಾರಿ ಸೆಂಟ್ರಲ್ ಜೈಲಿನ ಸಂದರ್ಶಕರ ಕೊಠಡಿಯಲ್ಲಿ ಸಹೋದರ ಮತ್ತು ಪತ್ನಿಯ ಜೊತೆ ದರ್ಶನ್ ಮಾತನಾಡಲು ಅರ್ಧ ಗಂಟೆ ಕಾಲಾವಕಾಶ ನೀಡಲಾಗಿದ್ದು, ಕಾನೂನು ಸಮರದ ಬಗ್ಗೆ ಚರ್ಚೆ ನಡೆಸಿದ್ದಾರೆ.

