ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಿಟ್ಟು, ಅನುಮೋದನೆ ಪಡೆಯಲಾಗುವುದು. ಈಗಾಗಲೇ ಅನೇಕ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸಲಾಗಿದೆ. ಡಿಸೆಂಬರ್ ಒಳಗಡೆ ಸಾಧ್ಯವಿರುವ ಮತ್ತಷ್ಟು ಕಚೇರಿಗಳನ್ನು ಸ್ಥಳಾಂತರ ಮಾಡಲಾಗುವುದು ಎಂದರು.
ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚಿಸಲಾಗಿದೆ. ಬಾಕಿ ಪಾವತಿಸದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಸಿಎಂ, ಕಬ್ಬು ಬೆಳೆಗಾರರಿಗೆ ಯಾವ ರೀತಿ ಸಹಾಯ ಮಾಡಬಹುದು ಎಂಬುದರ ಬಗ್ಗೆ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ, ಅಪೆಕ್ಟ್ ಬ್ಯಾಂಕ್ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಲ್ಲಿ ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.
ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…
ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…
ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.…
ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್…