ಬೆಳಗಾವಿ : ಬೆಳಗಾವಿಯಲ್ಲಿ 11 ದಿನ ಗಣೇಶೋತ್ಸವ ಆಚರಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಅನುಮತಿ ನೀಡಿದ್ದಾರೆ.
ಈ ಬಗ್ಗೆ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಮಾತನಾಡಿದ್ದು, ಬೆಳಗಾವಿ ಗಣೇಶೋತ್ಸವಕ್ಕೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ವಿಜೃಂಭಣೆಯ ಗಣೇಶೋತ್ಸವ ಆಚರಿಸಲಾಗುತ್ತದೆ. ಸಿಎಂ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ. ಅನುಮತಿ ನೀಡಿದ್ದಾರೆ. ಇನ್ನೇನು ಅಧಿಕೃತ ಆದೇಶವನ್ನು ಜಿಲ್ಲಾಡಳಿತದ ಕಡೆಯಿಂದ ಬಿಡುಗಡೆ ಮಾಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.