ಬೆಳಗಾವಿ

ಹುಚ್ಚು ಪ್ರೀತಿಗೆ ಬಲಿಯಾದ ಸಿಆರ್‌ಪಿಎಫ್‌ ಯೋಧ

ಸವದತ್ತಿ :  ಪ್ರೀತಿಯ ಬಲೆಗೆ ಬಿದ್ದ ಸಿಆರ್‌ಪಿಎಫ್‌ ಯೋಧನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ​ಗಾವಿ ಜಿಲ್ಲೆಯ ಸವ​ದ​ತ್ತಿ ತಾಲೂಕಿನ ಹಿರೇ ಉಳ್ಳಿಗೇರಿ ಗ್ರಾಮದಲ್ಲಿ ಸಂಭವಿಸಿದೆ.

ಸವ​ದತ್ತಿ ಪಟ್ಟ​ಣದ ಪದಕಿ ಓಣಿಯ ನಿವಾಸಿ ಹಾಗೂ ಸಿಆರ್‌ಪಿಎಫ್‌ ಯೋಧ ಶ್ರೀಶೈಲ್‌ಸೊಗಲದ (31) ಎಂಬಾತ ಮೃತ ಯೋಧ. ಈತ ಒಬ್ಬ ಯುವತಿಯನ್ನು ಪ್ರೀತಿಸುತ್ತಿದ್ದ. ಮನೆಯಲ್ಲಿ ಮದುವೆಗೆ ಒಪ್ಪಿಗೆ ನೀಡದಿದ್ದಾಗ ಹಾಗೂ ಯುವತಿಯು ಮದುವೆ ಮಾಡಿಕೊಳ್ಳಲು ಹಠ ಹಿಡಿದಾಗ ಮಾನಸಿಕ ಸಂದಿಗ್ಧ ಸ್ಥಿತಿಗೆ ಒಳಗಾಗಿದ್ದಾನೆ ಎನ್ನಲಾಗಿದೆ.

ಇಬ್ಬರು ಸೇರಿ ಸೆ. 7ರಂದು ಸವದತ್ತಿ ಸಬ್‌ರಜಿಸ್ಟರ್‌ ಕಚೇರಿಗೆ ಮದುವೆ ಮಾಡಿಕೊಳ್ಳಲು ಹೋಗಿದ್ದಾರೆ. ಆದರೆ ಆ ದಿವಸ ಮದುವೆ ಆಗದೆ ಇರುವದರಿಂದ ಸೆ. 8ರಂದು ಧಾರವಾಡಕ್ಕೆ ತೆರಳಿದ್ದಾರೆ. ನಂತರದಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ  ಶ್ರೀಶೈಲ್‌ ಮನೆಗೆ ಬಾರದೆ ಹಿರೇ ಉಳ್ಳಿಗೇರಿ ಗ್ರಾಮದ ವ್ಯಾಪ್ತಿಯ ಜಮೀನಿನೊಂದರಲ್ಲಿ ಡೆತ್‌ನೋಟ್‌ ಬರೆದಿಟ್ಟು ತನ್ನಷ್ಟಕ್ಕೆ ತಾನೆ ವಿಷ ಸೇವನೆ ಮಾಡಿಕೊಂಡಿದ್ದಾನೆ. ಈತನ ಸಾವಿನಲ್ಲಿ ಯುವತಿಯ ಮೇಲಾಗಲಿ ಹಾಗೂ ಬೇರೆ ಯಾರ ಮೇಲೂ ಯಾವುದೇ ಸಂಶಯ ಇಲ್ಲ ಎಂದು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Raksha Deshpande

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

3 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

4 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

4 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

5 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

5 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

5 hours ago