Ad

ಕಾಲುವೆಗೆ ಕಾಲು ಜಾರಿ ಬಿದ್ದು 4 ವರ್ಷದ ಬಾಲಕ ಮೃತ್ಯು

ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಚಿಕ್ಕೋಡಿ: ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಅರುಣ ಖದ್ದಿ (4) ಮೃತ ದುರ್ದೈವಿ. ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಆಟವಾಡಲು ಹೋದ ಅರುಣ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಡಲಾಗಿತ್ತು.

ಕಾಲುವೆಗೆ ಬಿದ್ದಾಗ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023