ಚಿಕ್ಕೋಡಿ: ರಿಕ್ಷಾ, ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.

ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಬೈಕ್ ಸವಾರ ಮಹಾಂತೇಶ್ ಮಾನೆ, ಅವರ ಪತ್ನಿ ಸಾಕ್ಷಿ ಮಾನೆ ಹಾಗೂ 6 ತಿಂಗಳ ಮಗು ಎಂದು ಗುರುತಿಸಲಾಗಿದೆ.

ಪತಿ, ಪತ್ನಿ ಹಾಗೂ ಮಗು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.