ಬೆಳಗಾವಿ: ಮದ್ದು ತಯಾರಿಸುವ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಜೀವ ದಹನವಾಗಿರುವ ಬೆಳಗಾವಿಯ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಮಲ್ಲಪ್ಪ ಸತ್ಯಪ್ಪ ಕಂಕಣವಾಡಿ (38) ಮೃತ ದುರ್ದೈವಿ. ಮಲ್ಲಪ್ಪ ಪಂಚಮಿ ಹಬ್ಬದಂದು ಮದ್ದು ಹಾರಿಸಲು ತಯಾರು ಮಾಡುತ್ತಿದ್ದರು. ಮದ್ದು ತಯಾರಿಸುವ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ.
ಏಕಾಏಕಿ ಬೆಂಕಿ ಎಲ್ಲೆಡೆ ಆವರಿಸಿದ್ದರಿಂದ ಮಲ್ಲಪ್ಪ ಸುಟ್ಟು ಭಸ್ಮವಾಗಿದ್ದಾರೆ. ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇಇರುವುದೇ ಈ ಆಚಾತುರ್ಯಕ್ಕೆ ಕಾರಣಕ್ಕೆ ಎನ್ನಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

