ಬೆಳಗಾವಿ : ಬೆಳಗಾವಿ ತಾಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಬಳಿಕ ಹಿಂತಿರುಗಿದ ಆರೋಪಿಗಳಿಗೆ ಹೂಮಾಲೆ ಹಾಕಿ ಆದ್ದೂರಿಯಾಗಿ ಸ್ವಾಗತಿಸಲಾಗಿದೆ.
ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಸಪ್ಪ ನಾಯಕ್ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿ ಹೊರಗೆ ಬರುವ ವೇಳೆ ಹೂಹಾರ ಹಾಕಿ ಪಟಾಕಿ ಹಚ್ಚಿ ಸಂಭ್ರಮದಿಂದ ಸ್ವಾಗತ ಮಾಡಿದ್ದಾರೆ. ಅಲ್ಲದೇ ಆರೋಪಿಗೆ ಹೂಹಾರ ಹಾಕಿ ವಿವಿಧ ಹಾಡುಗಳನ್ನು ಎಡಿಟ್ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಏನಿದು ಘಟನೆ?
2023ರ ಡಿಸೆಂಬರ್ 10 ರಂದು ವಂಟಮೂರಿ ಗ್ರಾಮದಲ್ಲಿ ಪ್ರೀತಿಯ ವಿಚಾರವಾಗಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಬಳಿಕ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 13 ಜನ ಆರೋಪಿಗಳನ್ನು ಕಾಕತಿ ಪೊಲೀಸರು ಬಂಧಸಿದ್ದರು. ಇದೀಗ ಏಪ್ರೀಲ್ 20 ರಂದು ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…