Bengaluru 24°C
Ad

ಮತ ಎಣಿಕೆ ವೇಳೆ ‘ಪಾಕ್’ ಪರ ಘೋಷಣೆ: ಆರೋಪಿ ಅರೆಸ್ಟ್

Arrest (1)

ಚಿಕ್ಕೋಡಿ: ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳುವ ಮುನ್ನ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಸಾಧಿಸುತ್ತಿದ್ದಂತೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕೋಡಿಯ ನಿಪ್ಪಾಣಿ – ಮುದೋಳ ರಾಜ್ಯ ಹೆದ್ದಾರಿ ಪಕ್ಕದಲ್ಲಿನ ಮತ ಎಣಿಕೆ ಕೇಂದ್ರದ ಬಳಿ ಘಟನೆ ನಡೆದಿದೆ.

ಪಾಕಿಸ್ತಾನ ಕಿ ಜೈ ಎಂಬ ಘೋಷಣೆ ಕೂಗಿದ ಆರೋಪದ ಮೇಲೆ ಜಮೀರ್​ ಸಿಕಂದರ್​ ನಾಯಿಕವಾಡಿ (25) ಎಂಬುವನನ್ನು ಚಿಕ್ಕೋಡಿ ಪೊಲೀಸರು ಬಂಧನ ಮಾಡಿದ್ದಾರೆ. ಮತ ಎಣಿಕೆ ನಡೆಯುತ್ತಿದ್ದ ಆರ್.ಡಿ.ಕಾಲೇಜಿನ ಎದುರಿನಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಪೊಲೀಸರು ತಡರಾತ್ರಿ ಆರೋಪಿಯನ್ನು ಬಂಧಿಸಿದ್ದಾರೆ.

‘ಪಾಕಿಸ್ತಾನ್​ ಕಿ ಜೈ’ ಅಂತಾ ಘೋಷಣೆ ಕೂಗಿದ ಆರೋಪದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಲಂ 295 (ಎ), 505(2) ಐಪಿಸಿ ಅಡಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad