ಬಾಗಲಕೋಟೆ : ಅಂತರ ರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಲೋಕ ಶಿಕ್ಷಣ ಸಮಿತಿಯ ಅಧ್ಯಕ್ಷ ರಾಜೇಂದ್ರ ಅವರು ಬುಧವಾರ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎನ್.ಬಿ.ಗೊರವರ ಸಾಕ್ಷರತಾ ಪ್ರಮಾಣ ವಚನವನ್ನು ಬೋಧಿಸಿದರು. 2019-20ನೇ ಸಾಲಿನ ನವಸಾಕ್ಷರರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದಾರ, ಇಳಕಲ್ಲ ಡಯಟ್ನ ಉಪನಿರ್ದೇಶಕ ಬಿ.ಕೆ.ನಂದನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿAಗ ಗೋಗಿ, ವಯಸ್ಕರ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಸಹಾಯಕ ಎಸ್.ಎನ್.ಕಲಬುರ್ಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.