News Karnataka Kannada
Saturday, May 04 2024
ಬಾಗಲಕೋಟೆ

ಕಾಂಗ್ರೆಸ್ ಪಕ್ಷ ಮುಳುಗುವ ಹಡಗು: ಸಚಿವ ಗೋವಿಂದ ಕಾರಜೋಳ

Belagavi: Rs 5 lakh announced for accident victim family
Photo Credit :

ಬಾಗಲಕೋಟೆ : ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಎರಡೇ ಗುಂಪುಗಳಿಲ್ಲ. ಕಾಂಗ್ರೆಸ್ ನಲ್ಲಿ ಮತ್ತೊಂದು ಗುಂಪು ಇದೆ ಎಂದು ಸಚಿವ ಗೋವಿಂದ ಕಾರಜೋಳ ತಿರುಗೇಟು ನಿಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಎರಡು ಗುಂಪುಗಳಾದರೆ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಹಾಗೂ ಶಾಮನೂರು ಶಿವಶಂಕರಪ್ಪ ಸೇರಿದಂತೆ ಇತರರು ಮೂರನೇ ಗುಂಪಿನಲ್ಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷವನ್ನು ಜನರು ಹೀನಾಯವಾಗಿ ಸೋಲಿಸಿದ್ದಾರೆ. ಇದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಸಿದ್ದರಾಮಯ್ಯ ಕಾಲದಲ್ಲಿ ಕೊರೊನಾ ಪ್ರವಾಹ ಇರಲ್ಲಿ. ಆದರೂ ಅವರು ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಕೆಲಸ ಮಾಡಿಲ್ಲ ಎಂದು ಜನರು ತಿಸ್ಕರಿಸಿದ್ದಾರೆ.

ಬಿಜೆಪಿಯ ಯಾವ ಶಾಸಕರೂ ಕಾಂಗ್ರೆಸ್ ಗೆ ಹೋಗಲ್ಲ. ಕಾಂಗ್ರೆಸ್ ಪಕ್ಷ ಮುಳುಗುವ ಹಡಗು, ಅಂತಹ ಪಕ್ಷಕ್ಕೆ ಬಿಜೆಪಿಯ ಯಾವ ಶಾಸಕರೂ ಹೋಗಲ್ಲ. ಬಿಜೆಪಿಯಲ್ಲಿ ವಲಸೆ ಶಾಸಕರು ಎಂದು ಯಾರೂ ಇಲ್ಲ. ಬಿಜೆಪಿಗೆ ಬಂದು ಸದಸ್ಯತ್ವ ಪಡೆದುಕೊಂಡಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು