ಗುರಿ ಮೀರಿ ಸಾಧನೆ : ಒಂದೇ ದಿನದಲ್ಲಿ 85,712 ಜನರಿಗೆ ಲಸಿಕೆ

ಬಾಗಲಕೋಟೆ : ಜಿಲ್ಲೆಯಾದ್ಯಂತ ಸೆಪ್ಟೆಂಬರ 17 ರಂದು ಹಮ್ಮಿಕೊಂಡ ಬೃಹತ್ ಲಸಿಕಾ ಮೇಳ ಸಂಪೂರ್ಣ ಯಶಸ್ವಿಯಾಗಿದ್ದು, ಒಂದೇ ದಿನದಲ್ಲಿ 85,712 ಜನರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ಸೆಪ್ಟೆಂಬರ 17 ರಂದು ಬೃಹತ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿತ್ತು. ಬಾಗಲಕೋಟೆ ಜಿಲ್ಲೆಗೆ ಒಂದೇ ದಿನದಲ್ಲಿ 75 ಸಾವಿರ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಆದರೆ ಗುರಿ ಮೀರಿ ಸಾಧನೆ ಮಾಡುವ ಮೂಲಕ ದಾಖಲೆ ನಿರ್ಮಿಸಲಾಗಿದೆ. ಅಲ್ಲದೇ ರಾಜ್ಯದ ಟಾಪ್ 15 ರಲ್ಲಿ 8ನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಬೃಹತ್ ಕೋವಿಡ್ ಲಸಿಕಾ ಮೇಳದ ಯಶಸ್ವಿಗೆ ಶ್ರಮಿಸಿದ ಕಂದಾಯ, ಆರೋಗ್ಯ, ಗ್ರಾಮೀಣಾಭಿವೃದ್ದಿ, ನಗರ ಸ್ಥಳೀಯ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಶಿಕ್ಷಣ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಮೇಳದ ಯಶಸ್ವಿಗೆ ಸಹಕರಿಸಿದ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೂ ಸಹ ಧನ್ಯವಾದಗಳನ್ನು ತಿಳಿಸಿದ್ದಾರೆ.
ಬೃಹತ್ ಲಸಿಕಾ ಮೇಳದಲ್ಲಿ ಒಟ್ಟು 85,712 ಜನರಿಗೆ ಲಸಿಕೆ ನೀಡಲಾಗಿದ್ದು, ಅದರಲ್ಲಿ ಮೊದಲನೇ ಡೋಸ್ 56316 ಜನ ಪಡೆದರೆ, ಎರಡನೇ ಡೋಸ್ 29396 ಜನ ಪಡೆದುಕೊಂಡಿದ್ದಾರೆ. ಕೋವಿಶಿಲ್ಡ ಲಸಿಕೆಯನ್ನು 77733 ಜನ, ಕೋವ್ಯಾಕ್ಸಿನ್ ಲಸಿಕೆಯನ್ನು 7979 ಜನ ಪಡೆದುಕೊಂಡಿರುತ್ತಾರೆ. ಮೇಳದಲ್ಲಿ ಜಮಖಂಡಿ ತಾಲೂಕಿನಲ್ಲಿ ಅತೀ ಹೆಚ್ಚು ಅಂದರೆ 22,155 ಜನ ಪಡೆದುಕೊಂಡಿದ್ದಾರೆ. ಬಾದಾಮಿ ತಾಲೂಕಿನಲ್ಲಿ 16910, ಬಾಗಲಕೋಟೆ 10646, ಬೀಳಗಿ 8057, ಹುನಗುಂದ 16119, ಮುಧೋಳ 11677 ಜನ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ 149 ಜನ ಲಸಿಕೆ ಪಡೆದುಕೊಂಡಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Raksha Deshpande

Recent Posts

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

4 seconds ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

3 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

15 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

18 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

19 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

41 mins ago