News Karnataka Kannada
Sunday, April 28 2024
ಬಾಗಲಕೋಟೆ

ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ

New Project 2021 09 17t160124.709
Photo Credit :

ಬಾಗಲಕೋಟೆ: ಗ್ರಾಮೀಣ ಭಾಗಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು, ಬಾಸ್ ಪಾಸ್ ನೀಡಬೇಕು, ಬಾಕಿ ಉಳಿದಿರುವ ಶಿಷ್ಯ ವೇತನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ಜಿಲ್ಲಾಽಕಾರಿ ಕೆ.ರಾಜೇಂದ್ರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಈಗ ಪುನರಾರಂಭಗೊ0ಡಿವೆ. ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನ ಹರಿಸಿದ್ದಾರೆ. ಕೋವಿಡ್ ಕಾರಣಕ್ಕೆ ತರಗತಿಗಳ ಸಮಯ ಬದಲಾಗಿದೆ. ಅಲ್ಲದೆ ಲಾಕ್‌ಡೌನ್ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ಸಂಚರಿಸುತ್ತಿದ್ದ ಬಸ್ ಸಂಚಾರ ಪುನರ್ ಆರಂಭಗೊ0ಡಿಲ್ಲ. ದಿನಕ್ಕೆ ಒಂದು, ಎರಡು ಬಸ್‌ಗಳು ಮಾತ್ರ ಸಂಚರಿಸುತ್ತೀವೆ. ಇದರಿಂದ ವಿದ್ಯಾರ್ಥಿಗಳು ಬಸ್‌ಗಳು ಇಲ್ಲದೆ ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

ಡಿಪ್ಲೋಮಾ ಇಂಜಿನಿಯರಿ0ಗ್ ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿ.ಎಚ್.ಡಿ ಮಾಡುತ್ತಿರುವ ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಷ್ಯ ವೇತನ ಪೂರ್ಣ ಪ್ರಮಾಣದಲ್ಲಿ ಬಿಡುಗಡೆಯಾಗಿಲ್ಲ. ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ವಿದ್ಯಾಸಿರಿ ಸೇರಿದಂತೆ ಎಲ್ಲ ಶಿಷ್ಯ ವೇತನ ಪೂರ್ಣ ಪ್ರಮಾಣದಲ್ಲಿ ಬಿಡುಗಡೆಗೊಳಿಸಬೇಕು. ವಿದ್ಯಾರ್ಥಿಗಳ ಸಂಖ್ಯೆ ಅನುಗುಣವಾಗಿ ವಸತಿ ನಿಲಯಗಳ ಹೆಚ್ಚಿಸಬೇಕು. ಹಾಸ್ಟೆಲ್‌ಗಳಲ್ಲಿ ಮೂಲ ಸೌಕರ್ಯ ಸಮಪರ್ಕವಾಗಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ಸಹ ಸಂಚಾಲಕ ಉನ್ನತ ಬೇವಿನಕಟ್ಟಿ, ತೇಜಸ್ ಗೌಡ, ಹಯವದನ ದೇಸಾಯಿ, ಸುಹಾಸ್ ಬಡಿಗೇರ,  ಓಂಕಾರ ಪೀಪಲ್ವ, ಚನ್ನಪ್ಪ ಈಜೇರಿ, ಶಶಾಂಕ ಜೋಶಿ, ಅಭಿಷೇಕ ಗೌಡರ, ಪವನ ಮಳಗಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು