News Karnataka Kannada
Wednesday, May 01 2024
ಬಾಗಲಕೋಟೆ

ಜಿ.ಪಂ, ತಾ.ಪಂ ಕ್ಷೇತ್ರಗಳ ಮೀಸಲಾತಿಗಾಗಿ ಪ್ರತ್ಯೇಕ ಆಯೋಗ ರಚನೆ ಸಂವಿಧಾನ ಬಾಹೀರ : ಮಾಜಿ ಸಂಸದ ನಾರಾಯಣಸ್ವಾಮಿ

New Project (59)
Photo Credit :

ಬಾಗಲಕೋಟೆ: ರಾಜ್ಯ ಸರ್ಕಾರ ಜಿ.ಪಂ, ತಾ.ಪಂ ಕ್ಷೇತ್ರಗಳ ಮೀಸಲಾತಿಗಾಗಿ ಪ್ರತ್ಯೇಕ ಆಯೋಗ ರಚನೆ ಮಾಡಲು ಮುಂದಾಗಿರುವುದು ಸಂವಿಧಾನ ಬಾಹೀರವಾಗಿದೆ. ಚುನಾವಣೆ ಆಯೋಗದ ಅಧಿಕಾರದ ವ್ಯಾಪ್ತಿ ಮೊಟಕುಗೊಳಿಸುವ ಉದ್ದೇಶದಿಂದ ಈ ಪ್ರಯತ್ನಕ್ಕೆ ಮುಂದಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಆಘಾತ ಎಂದು ಕಾಂಗ್ರೆಸ್ ಪಕ್ಷದ ರಾಜೀವಗಾಂಧಿ  ಗ್ರಾಮೀಣ ಅಭಿವೃಧಿ  ಹಾಗೂ  ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಾರಾಯಣಸ್ವಾಮಿ ಆರೋಪಿಸಿದರು.

ಈ ವರೆಗೆ ಚುನಾವಣೆ ಆಯೋಗವು ಕ್ಷೇತ್ರಗಳ ಪುನರ್ ವಿಂಗಡಣೆ, ಮೀಸಲಾತಿ ಸೇರಿದಂತೆ ವಿವಿಧ ವಿಷಯಗಳ ಮೇಲೆ ಪ್ರಭುತ್ವ ಹೊಂದಿತ್ತು. ಪ್ರತ್ಯೇಕ ಆಯೋಗ ರಚನೆ ಮಾಡಿ, ಅದಕ್ಕೆ ಸರ್ಕಾರದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಉನ್ನತ ಅಧಿಕಾರಿಗಳನ್ನು ನೇಮಕ ಮಾಡುವ ಆಲೋಚನೆ ಹೊಂದಿದೆ. ಇದರಿಂದ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಆಡಳಿತ ಪಕ್ಷದ ಹಸ್ತಕ್ಷೇಪ ಹೆಚ್ಚಾಗುತ್ತದೆ. ನ್ಯಾಯಸಮ್ಮತ, ಸಮಾಜಿಕ ನ್ಯಾಯ ಪರಿಪಾಲನೆ ಆಗುವುದು ಅನುಮಾನ. ಸರ್ಕಾರದ ಈ ನಿರ್ಧಾರ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕ ಪಂಚಾಯತ ಕ್ಷೇತ್ರ ವಿಂಗಡಣೆ, ಮೀಸಲಾತಿ ಸಂಬOಧ ಯಾವುದೇ ಆಕ್ಷೇಪಣಾ ಅರ್ಜಿಗಳು ಈಗ ನ್ಯಾಯಾಲಯ ಮುಂದೆ ಇಲ್ಲ. ಹೀಗಾಗಿ ಸರ್ಕಾರ ಕೂಡಲೇ ಚುನಾವಣೆ ಘೋಷಣೆ ಮಾಡಬೇಕು. ರಾಜ್ಯದಲ್ಲಿ ಬರುವ ಡಿಸೆಂಬರ್‌ಗೆ 25 ವಿಧಾನ ಪರಿಷತ್ತಿನ ಸ್ಥಾನಗಳ ಅವಧಿ ಮುಕ್ತಾಯವಾಗಲಿದೆ. ಚುನಾವಣೆಗೆ ಜಿಪಂ,ತಾಪO ಪ್ರತಿನಿಧಿಗಳು ಮತ ಚಲಾಯಿಸುವಂತೆ ಅವಕಾಶ ಸಿಗಬೇಕು. ಆಯೋಗ ರಚನೆ ಮೂಲಕ ಚುನಾವಣೆ ಮುಂದೂಡುವ ತಂತ್ರಗಾರಿಕೆ ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿರುವುದು ತರವಲ್ಲ ಎಂದರು.

ಸOಘಟನೆ ರಾಜ್ಯ ಉಪಾಧ್ಯಕ್ಷ ಡಿ.ಆರ್.ಪಾಟೀಲ ಮಾತನಾಡಿ, ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಕಾ ರದಲ್ಲಿ ಇದ್ದಾಗ ಪಂಚಾಯತ್ ರಾಜ್ಯ ವ್ಯವಸ್ಥೆಯಲ್ಲಿ ಹಲವಾರು ನಿಯಮ, ಕಾನೂನು ಬದಲಾವಣೆ ತಂದಿದೆ. ಪ್ರಜಾಪ್ರಭುತ್ವ ಆಶಯಕ್ಕೆ ತಕ್ಕಂತೆ ಅವುಗಳನ್ನು ರೂಪಿಸಲಾಗಿದೆ. ಬಿಜೆಪಿ ಸರ್ಕಾರ ಜಾರಿಗೊಳಿಸಿ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಸಾಕಾರಗೊಳಿಸಬೇಕು. ನಮ್ಮ ಸಂಘಟನೆಯು ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದೆ. ಅಕ್ಟೋಬರ್ ತಿಂಗಳಿನಲ್ಲಿ ಬೃಹತ್ ಸಮಾವೇಶ ಏರ್ಪಡಿಸಲಾಗುವುದು ಎಂದು ಹೇಳಿದರು.

ಸಂಘಟನೆಯ ರಾಷ್ಟ್ರೀಯ ಸಹ ಸಂಚಾಲಕಿ ಬಿನಿತಾ ವೋರಾ, ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ , ವಿ.ವೈ.ಘೋರ್ಪಡೆ, ಮಾಜಿ ಸಚಿವ ಎಚ್.ವೈ.ಮೇಟಿ, ಮಾಜಿ ಶಾಸಕ ಜೆ.ಟಿ.ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು