News Karnataka Kannada
Tuesday, April 30 2024
ಬಾಗಲಕೋಟೆ

ತತ್ವಪದ ಗಾಯಕ ಇಬ್ರಾಹಿಂ ಸುತಾರ ವಿಧಿವಶ

Ibrahim Sutar
Photo Credit : News Kannada

ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತ, ಸೂಫಿ ಸಂತ, ತತ್ವಪದ ಗಾಯಕ ಇಬ್ರಾಹಿಂ ಸುತಾರ ವಿಧಿವಶರಾಗಿದ್ದಾರೆ. ತಮ್ಮ ಪ್ರವಚನ ಮತ್ತು ಸಂವಾದಗಳ ಮೂಲಕ ಹಿಂದೂ-ಮುಸ್ಲೀಮರ ಮಧ್ಯೆ ಭಾವೈಕ್ಯತೆಯನ್ನು ಹರಡಿದ ಮಹಾಲಿಂಗಪುರದ ಇಬ್ರಾಹಿಂ ಸುತಾರ ಶನಿವಾರ ಇಹಲೋಕ ತ್ಯಜಿಸಿದ್ದಾರೆ.

ಅವರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಬಡ ಕುಟುಂಬದಲ್ಲಿ ಇಬ್ರಾಹಿಂ ಸುತಾರ 1940ರ ಮೇ 10ರಂದು ಜನಿಸಿದರು. ಇವರ ತಂದೆ ನಬಿಸಾಹೇಬ್ ಮತ್ತು ತಾಯಿ ಅಮೀನಾಬಿ.

“ಪದ್ಮಶ್ರೀ ಪುರಸ್ಕೃತರು ಖ್ಯಾತ ಪ್ರವಚನಕಾರ ಮಹಾಲಿಂಗಪೂರದ ಇಬ್ರಾಹಿಂ ಸುತಾರ ಅವರು ಇಂದು ಮುಂಜಾನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.ಭಗವಂತ ಅವರ ದಿವ್ಯಾತ್ಮಕ್ಕೆ ಚಿರಶಾಂತಿ ನೀಡಲಿ,” ಎಂದು ಸಚಿವ ಗೋವಿಂದ್ ಕಾರಜೋಳ ಟ್ವೀಟ್ ಸಂತಾಪ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು