News Karnataka Kannada
Friday, May 10 2024
ಬಾಗಲಕೋಟೆ

ನಾನು ಇದೇ ಅವಧಿಯಲ್ಲಿ ಸಿಎಂ ಆಗಬಹುದು : ಉಮೇಶ ಕತ್ತಿ

Umesh Kathi 12 7 21
Photo Credit :

ಬಾಗಲಕೋಟೆ : ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ,ಬರುವ ದಿನಗಳಲ್ಲಿ ನಾನು ಕೂಡ ಮುಖ್ಯಮಂತ್ರಿ ಆಗಬಹುದು. ಇದೇ ಅವಧಿಯಲ್ಲಿ ಸಿಎಂ ಆಗುತ್ತೇನೆ ಅಂತಾ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ.

75ನೇ ಸ್ವಾತಂತ್ರ‍್ಯ ದಿನಾಚರಣೆ ಸಂಭ್ರಮ ಹಿನ್ನೆಲೆ ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇದೇ ಅವಧಿಯಲ್ಲಿ ಅಥವಾ ಮುಂದಿನ ಅವಧಿಯಲ್ಲಿ ಸಿಎಂ ಆಗುವೆ. ಸತ್ತರೆ ನನ್ನ ಕಡೆಯಿಂದ ಏನೂ ಮಾಡಲು ಆಗಲ್ಲವೆಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಅಲ್ಲದೆ ನಗುನಗುತ್ತಲೇ ಸಿಎಂ ಆಗುವ ಆಸೆಯನ್ನು ಉಮೇಶ್ ಕತ್ತಿ ತಿಳಿಸಿದ್ದಾರೆ. ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ.

ಇಷ್ಟು ದಿನ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎನ್ನುತ್ತಿದ್ದ ಸಚಿವ ಉಮೇಶ್ ಕತ್ತಿ ಇದೀಗ ಹೊಸ ವರಸೆ ಶುರು ಮಾಡಿದ್ದಾರೆ. ಕತ್ತಿ ಹೇಳಿಕೆಯಿಂದ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರ ಪೂರ್ಣಗೊಳಿಸಲ್ವಾ ಎನ್ನುವ ಪ್ರಶ್ನೆ ಮೂಡಿದೆ. ಕತ್ತಿ ಹೇಳಿಕೆ ಹಿಂದಿರುವ ಒಳ ಮರ್ಮವೇನು ಅನ್ನೋ ಪ್ರಶ್ನೆಯೂ ಕಾಡುತ್ತಿದೆ. ಸಿಎಂ ಕುರ್ಚಿ ಮೇಲೆ ಕತ್ತಿ ಕಣ್ಣು ಇಟ್ಟಿದ್ದು, ಕೇಸರಿ ಪಾಳಯದಲ್ಲಿ ಸಂಚಲನ ಮೂಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು