ನೆಹರು ಯುವ ಕೇಂದ್ರದ ವಿವಿಧ ಚಟುವಟಿಕೆಗಳ ಕ್ರಿಯಾ ಯೋಜನೆ ಸಿದ್ದ

ಬಾಗಲಕೋಟೆ :  ನೆಹರು ಯುವ ಕೇಂದ್ರದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಒಟ್ಟು 8.74 ಲಕ್ಷಗಳ ರೂ.ಗಳ ವಾರ್ಷಿಕ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಾರ್ಷಿಕ ಕ್ರೀಯಾ ಯೋಜನೆಯಲ್ಲಿ ಆತ್ಮ ನಿರ್ಭರ ಭಾರತ ಯುವ ಮ್ಯಾಪಿಂಗ್ ಕೌಶಲ್ಯ, ಯುವ ಸಂಪರ್ಕ, ಸ್ವಚ್ಛತಾ ಜಾಗೃತಿ ಅಭಿಯಾನ, ಶ್ರಮದಾನ, ಡಿಜಿಟಲ್ ಸೌಲಭ್ಯ ಮತ್ತು ಬ್ಯಾಂಕ್ ಮಿತ್ರರ ಸಿಬ್ಬಂದಿಯನ್ನು ರೂಪಿಸುವದು, ವೃತ್ತಿ ಮಾರ್ಗದರ್ಶನ ಮತ್ತು ವೃತ್ತಿ ಸಮಾಲೋಚನೆ, ವಿಪತ್ತು ಅಪಾಯ ತಗ್ಗಿಸುವ ಸಿದ್ದತೆ ಮತ್ತು ತಂಡಗಳನ್ನು ರಚಿಸುವುದು, ಅತ್ಯುತ್ತಮ ಯುವ ಕ್ಲಬ್‍ಗಳಿಗೆ ಪ್ರಶಸ್ತಿ ನೀಡುವುದು ಸೇರಿದಂತೆ ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ನೆಹರು ಯುವ ಕೇಂದ್ರದ ಮೂಲಕ ಹಮ್ಮಿಕೊಂಡ ಚಟುವಟಿಕೆಗಳಲ್ಲಿ ಯುವಕರು ಹೆಚ್ಚಾಗಿ ಪಲ್ಗೊಳ್ಳುವಂತೆ ಮಾಡಬೇಕು. ಯುವಕರನ್ನು ಮೋಟಿವೇಶನ ಮಾಡುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ತಾಲೂಕಾವಾರು ಸಭೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು. ಪ್ರಶಸ್ತಿ ಆಯ್ಕೆಗೆ ಹೊಸದಾಗಿ ಉಪ ಸಮಿತಿಯನ್ನು ರಚಿಸಲು ಸಹ ಇದೇ ಸಂದರ್ಭದಲ್ಲಿ ತಿಳಿಸಿದರು.

ಜಿಲ್ಲಾ ಯುವ ಅಧಿಕಾರಿ ಸುಷ್ಮಾ ಗವಳಿ ಮಾತನಾಡಿ ನೆಹರು ಯುವ ಕೇಂದ್ರದ ಪರಿಚಯದೊಂದಿಗೆ ಕ್ರಿಯಾ ಯೋಜನೆಯಲ್ಲಿ ರೂಪಿಸಿದ ವಿವಿಧ ಚಟುವಟಿಕೆಗಳ ಉದ್ದೇಶಗಳ ಬಗ್ಗೆ ಸಭೆಯಲ್ಲಿ ತಿಳಿಸಿದರು. ನೆಹರು ಯುವ ಕೇಂದ್ರದಲ್ಲಿ ಈಗಾಗಲೇ 548 ಯೂತ್ ಕ್ಲಬ್‍ಗಳನ್ನು ರಚಿಸಲಾಗಿದ್ದು, ಅದರಲ್ಲಿ 9150 ಮಹಿಳಾ 7290 ಪುರುಷರು ಸೇರಿದ ಒಟ್ಟು 16440 ಸದಸ್ಯರು ಇದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಮರೇಶ ನಾಯಕ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎನ್.ವಾಯ್.ಕುಂದರಗಿ, ಜಿಲ್ಲಾ ಎಲ್‍ಡಿಎಂ ಗೋಪಾಲರೆಡ್ಡಿ, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಕಟ್ಟಿಮನಿ, ನೆಹರು ಯುವ ಕೇಂದ್ರದ ಕಾರ್ಯಕ್ರಮ ಸಹಾಯಕ ರಾಮರಾವ್ ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Raksha Deshpande

Recent Posts

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

6 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

12 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

27 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

38 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

53 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

1 hour ago