ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ಡೋಮನಾಳ ಗ್ರಾಮದಲ್ಲಿ ಉರುಸ್ನಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆನಡೆದಿದೆ.
ಉರುಸ್ನಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, 22 ಮಕ್ಕಳು ಸೇರಿದಂತೆ 26 ಜನರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಊಟ ಸೇವಿಸಿದ್ದ ಇವರಿಗೆ ವಾಂತಿ-ಬೇಧಿ ಕಾಣಿಸಿಕೊಂಡಿದ್ದು, ಅಸ್ವಸ್ಥರಾಗಿದ್ದಾರೆ. ಇವರೆಲ್ಲರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.