ಬಾಗಲಕೋಟೆ: ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದ ಪತ್ನಿಯ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ತೋಳಮಟ್ಟಿ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಯಲ್ಲಪ್ಪ ಮಾದರ (24) ಮೃತರು.
ಪತ್ನಿಯ ಅನೈತಿಕ ಸಂಭಂದ ಸಂಶಯಗೊಂಡು ಕೊಲೆ ಮಾಡಿರುವ ಬಗ್ಗೆ ಪೊಲೀಸ್ ಶಂಕೆ ವ್ಯಕ್ತಪಡಿಸಿದ್ದಾರೆ.ಕೊಡಲಿಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ.ಕೊಲೆ ಮಾಡಿದ ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾನಾಗಿದ್ದಾನೆ.ಬೀಳಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ.