ಬಾಹಲಕೋಟೆಯಲ್ಲಿ ಬೃಹತ್ ಲಸಿಕಾ ಮೇಳ : ಜನತೆಯಿಂದ ಉತ್ತಮ ಸ್ಪಂದನೆ

ಬಾಗಲಕೋಟೆ: ಜಿಲ್ಲೆಯಾದ್ಯಂತ ಶುಕ್ರವಾರ ಹಮ್ಮಿಕೊಂಡ ಬೃಹತ್ ಕೋವಿಡ್-19 ಲಸಿಕಾ ಮೇಳಕ್ಕೆ ಜಿಲ್ಲೆಯ ಜನತೆಯಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮತ್ತು ಜಿ.ಪಂ ಸಿಇಓ ಟಿ.ಭೂಬಾಲನ್ ಜಂಟಿಯಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆ ಮೇರೆಗೆ ಜಿಲ್ಲೆಯಾದ್ಯಂತ ನಡೆದ ಬೃಹತ್ ಲಸಿಕಾ ಮಹಾಮೇಳದಲ್ಲಿ ಬಾಗಲಕೋಟೆ ಜಿಲ್ಲೆಗೆ 75 ಸಾವಿರ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಬೆಳಿಗ್ಗೆಯಿಂದ ಸಂಜೆ 7ರ ಹೊತ್ತಿಗೆ 66,161 ಜನರಿಗೆ ಲಸಿಕೆ ನೀಡುವ ಮೂಲಕ ಶೇ.88 ರಷ್ಟು ಪ್ರತಿ ಸಾಧಿಸಲಾಗಿದೆ. ರಾಜ್ಯದಲ್ಲಿ ಟಾಪ್ 15 ರಲ್ಲಿ ಬಾಗಲಕೋಟೆ ಜಿಲ್ಲೆ ಸಹ ಒಂದಾಗಿದೆ ಎಂದು ತಿಳಿಸಿದ್ದಾರೆ.

ಸಂಜೆ 5.30ರ ಹೊತ್ತಿಗೆ 55485 ಜನರಿಗೆ ಲಸಿಕೆ ನೀಡಲಾಗಿದೆ. ಬಾದಾಮಿ ತಾಲೂಕಿನಲ್ಲಿ 9924 ಜನ ಲಸಿಕೆ ಪಡೆದುಕೊಂಡರೆ, ಬಾಗಲಕೋಟೆ 8180, ಬೀಳಗಿ 5257, ಹುನಗುಂದ 11283, ಜಮಖಂಡಿ 14573 ಹಾಗೂ ಮುಧೋಳ ತಾಲೂಕಿನಲ್ಲಿ 6268 ಜನ ಲಸಿಕೆ ಪಡೆದುಕೊಂಡಿದ್ದು, ಪ್ರಾರಂಭದಲ್ಲಿ ಲಸಿಕಾ ಕೇಂದ್ರಕ್ಕೆ ಬರುವ ಸಂಖ್ಯೆ ಕಡಿಮೆ ಇದ್ದರೂ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವುದು ಕಂಡುಬಂದಿತು. ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಲಸಿಕಾ ಮೇಳದಲ್ಲಿ 10.30 ಗಂಟೆಗೆ 2187 ಜನ ಲಸಿಕೆ ಪಡೆದುಕೊಂಡರೆ, 11.30ಕ್ಕೆ 10928À, 1.30ಕ್ಕೆ 26088, 3.30ಕ್ಕೆ 40263, 4.30ಕ್ಕೆ 44077, 5.30ಕ್ಕೆ 55485, 6.30ರ ಹೊತ್ತಿಗೆ 58,610 ಹಾಗೂ ಸಂಜೆ 7ಕ್ಕೆ ಒಟ್ಟು 66161 ರಷ್ಟು ಜನ ಲಸಿಕೆ ಪಡೆದುಕೊಂಡಿದ್ದರು ಎಂದು ತಿಳಿಸಿದರು.
ವಿವಿಧ ಲಸಿಕಾ ಕೇಂದ್ರಕ್ಕೆ ಡಿಸಿ, ಸಿಇಓ ಭೇಟಿ ಪರಿಶೀಲನೆ

Sampriya YK

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

21 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

36 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago